ವಶಪಡಿಸಿಕೊಂಡ ಗಾಂಜಾ ಗಿಡಗಳ ಒಟ್ಟು ತೂಕ 213 ಕೆ.ಜಿ. 600 ಗ್ರಾಂ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ಗಾಂಜಾ ಬೆಳೆಯುತ್ತಿರುವ ಬಗ್ಗೆ ದೊರೆತ ಮಾಹಿತಿಯ ಆಧಾರದ ಮೇಲೆ ಅಧಿಕಾರಿಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸಿ ಗಿಡಗಳನ್ನು ಪತ್ತೆಹಚ್ಚಿದ್ದಾರೆ.
ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಸವರಾಜ ಹಡಪದ, ಬಿಆರ್ಟಿ ಡಿಸಿಎಫ್ ಶ್ರೀಪತಿ ಹಾಗೂ ಚಾಮರಾಜನಗರ ಜಿಲ್ಲಾ ಅಬಕಾರಿ ಉಪ ಆಯುಕ್ತ ಚಂದ್ರ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು.
ಚಾಮರಾಜನಗರ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ಕೆ.ಟಿ. ವಿಜಯ್ ಕುಮಾರ್, ಅಬಕಾರಿ ನಿರೀಕ್ಷಕರಾದ ಸಿ.ಎಂ. ದಯಾನಂದ ಹಾಗೂ ಉಮಾಶಂಕರ್, ಬೈಲೂರು ವಲಯ ಅರಣ್ಯಾಧಿಕಾರಿ ಡಿ. ದೇವರಾಜು ಮತ್ತು ಉಪ ವಲಯ ಅರಣ್ಯಾಧಿಕಾರಿ ಎಸ್. ರಾಜೇಶ್ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.
ವಶಪಡಿಸಿಕೊಂಡ ಗಾಂಜಾ ಗಿಡಗಳನ್ನು ಇಲಾಖೆಯ ವಶಕ್ಕೆ ಪಡೆದು, ಅಬಕಾರಿ ನಿರೀಕ್ಷಕ ದಯಾನಂದ ಹಾಗೂ ಉಪ ನಿರೀಕ್ಷಕಿ ನಂದಿನಿ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅಕ್ರಮವಾಗಿ ಗಾಂಜಾ ಬೆಳೆದಿರುವವರ ಪತ್ತೆಗೆ ತನಿಖೆ ಮುಂದುವರೆದಿದೆ.
ಮಾದಕ ವಸ್ತುಗಳ ಅಕ್ರಮ ಬೆಳೆ ಅಥವಾ ಸಾಗಾಟದ ಬಗ್ಗೆ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಅಬಕಾರಿ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಗಾಂಜಾ ಗಿಡಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡ ಅಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯವನ್ನು ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ.
ವರದಿ :ಕಾರ್ತಿಕ್ ಗೌಡ ಹನೂರು.


