
ಧಾರವಾಡ: ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಭಾರೀ ಮುನ್ನಡೆ ಸಾಧಿಸಿದ್ದಾರೆ.
ಮೊದಲ ಸುತ್ತಿನಲ್ಲಿ ಒಟ್ಟು 14,000 ಮತಗಳ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ 6,483 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ 4,277 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿಗಿಂತ ಬಿಜೆಪಿ ಅಭ್ಯರ್ಥಿ ಸಂಕನೂರ 2,206 ಮತಗಳ ಮುನ್ನಡೆ ಸಾಧಿಸಿದ್ದು, ಮುಂದಿನ ಸುತ್ತಿನ ಮತ ಎಣಿಕೆಯತ್ತ ಎಲ್ಲರ ಗಮನ ನೆಟ್ಟಿದೆ.

