ರಾಯಚೂರು: ರಾಯಚೂರು ಲೋಕಸಭಾ ಕ್ಷೇತ್ರದ ಪ್ರಮುಖ ಬೇಡಿಕೆಯಾದ ಏಮ್ಸ್ (AIIMS) ಆಸ್ಪತ್ರೆಯನ್ನು ಜಿಲ್ಲೆಯಲ್ಲಿ ಸ್ಥಾಪಿಸುವ ಅನಿವಾರ್ಯತೆಯನ್ನು ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರು ಸಂಸತ್ತಿನಲ್ಲಿ ಪ್ರಸ್ತಾಪಿಸುವ ಮೂಲಕ ಗಮನ ಸೆಳೆದಿದ್ದಾರೆ. ಕರ್ನಾಟಕದ ಈ ಬಹುಕಾಲದ ಬೇಡಿಕೆಯನ್ನು ಕೇಂದ್ರ ಸರ್ಕಾರವು ಕೂಡಲೇ ಅನುಮೋದಿಸಬೇಕೆಂದು ಅವರು ರಾಜ್ಯಸಭೆಯಲ್ಲಿ ಬಲವಾಗಿ ಮನವಿ ಮಾಡಿದ್ದು, ಇದಕ್ಕೆ ಕಲ್ಯಾಣ ಕರ್ನಾಟಕದ ಜನತೆ ಹಾಗೂ ಸಾಮಾಜಿಕ ಹೋರಾಟಗಾರರು ವ್ಯಾಪಕವಾಗಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಹೊತ್ತಿರುವ ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಜನರ ಆರೋಗ್ಯ ಸಮಸ್ಯೆಗಳು ಮತ
Location: Kundgol
Category: Politics

