ಹುಬ್ಬಳ್ಳಿಯಲ್ಲಿ MDMA ಮಾತ್ರೆಗಳ ಮಾರಾಟ ಜಾಲ ಪತ್ತೆ: ಇಬ್ಬರು ತಮಿಳುನಾಡು ಮೂಲದವರು ಸೇರಿ ಮೂವರ ಬಂಧನ, 1.3 ಕೆ.ಜಿ. ಮಾದಕ ವಸ್ತು ಜಪ್ತಿ
ವರದಿ:
ಮೈ ಪಬ್ಲಿಕ್ ಸಮಾಚಾರ ಡೆಸ್ಕ್
27 Nov 2026• 12 ಗಂಟೆಗಳ ಹಿಂದೆ• 1 ನಿಮಿಷ ಓದು
30-ಸೆಕೆಂಡ್ ಮುಖ್ಯಾಂಶಗಳು (30-Sec AI Summary)
ಪ್ರಮುಖ ಬೆಳವಣಿಗೆ: ಹುಬ್ಬಳ್ಳಿಯಲ್ಲಿ MDMA ಮಾತ್ರೆಗಳ ಮಾರಾಟ ಜಾಲ ಪತ್ತೆ: ಇಬ್ಬರು ತಮಿಳುನಾಡು ಮೂಲದವರು ಸೇರಿ ಮೂವರ ಬಂಧನ, 1.3 ಕೆ.ಜಿ. ಮಾದಕ ವಸ್ತು…
Spread the loveಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೃಹತ್ ಡ್ರಗ್ಸ್ ದಂಧೆಯನ್ನು ಪತ್ತೆಹಚ್ಚಿದ್ದಾರೆ. ಗೋಕುಲ್ ರೋಡ್…
ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮತ್ತು ಸ್ಥಳೀಯ ಮೂಲಗಳಿಂದ ಸಮಗ್ರ ವರದಿ ಪರಿಶೀಲನೆ.
ಸುದ್ದಿ ಆಲಿಸಿ • ಸಿದ್ಧವಾಗಿದೆ (Ready)
AI ಆಡಿಯೋ ನ್ಯೂಸ್‌ರೂಮ್ • ಕನ್ನಡ & English
ವೇಗ:
Spread the love
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೃಹತ್ ಡ್ರಗ್ಸ್ ದಂಧೆಯನ್ನು ಪತ್ತೆಹಚ್ಚಿದ್ದಾರೆ. ಗೋಕುಲ್ ರೋಡ್ ಪೊಲೀಸ್ ಠಾಣೆಯ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಅಂತರರಾಜ್ಯ ಆರೋಪಿಗಳು ಸೇರಿದಂತೆ ಒಟ್ಟು ಮೂವರು ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಿ, ಬರೋಬ್ಬರಿ 1 ಕೆ.ಜಿ. 300 ಗ್ರಾಂ ಎಂಡಿಎಂಎ (MDMA) ಮಾದಕ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ರಘು ಕೃಷ್ಣನ್ ತಂದೆ ರಾಮಸ್ವಾಮಿ, ರಾಜಕುಮಾರ್ ತಂದೆ ಶ್ರೀನಿವಾಸನ್ ಹಾಗೂ ಪ್ರವೀಣ್ ವಿಜಯ್ ಶೆಟ್ಟಿ ಎಂದು ಗುರುತಿಸಲಾಗಿದೆ. ಜಪ್ತಿ ಮಾಡಲಾದ ಮಾದಕ ವಸ್ತುಗಳ ಮೌಲ್ಯ ಒಂದು ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಬಂಧಿತ ಆರೋಪಿಗಳ ಪೈಕಿ ರಘು ಕೃಷ್ಣನ್ ಹಾಗೂ ಪ್ರವೀಣ್ ವಿಜಯ್ ಶೆಟ್ಟಿ ವಿರುದ್ಧ ಈ ಹಿಂದೆಯೂ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ.
ಈ ಡ್ರಗ್ಸ್ ಜಾಲವು ಕಾಲೇಜು ವಿದ್ಯಾರ್ಥಿಗಳು, ಟೆಕ್ಕಿಗಳು ಹಾಗೂ ಪಾರ್ಟಿ ಆಯೋಜಕರನ್ನೇ ಪ್ರಮುಖ ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿತ್ತು ಎನ್ನಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಮಾದಕ ವಸ್ತುಗಳನ್ನು ಪೂರೈಸಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಜಾಲದ ಹಿಂದೆ ಇನ್ನೂ ಯಾರಾದರೂ ಪ್ರಮುಖ ವ್ಯಕ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆಯೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಷ್ಟೊಂದು ಬೃಹತ್ ಪ್ರಮಾಣದ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಡ್ರಗ್ಸ್ ಜಾಲವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ ಗೋಕುಲ್ ರೋಡ್ ಪೊಲೀಸರ ಕಾರ್ಯಕ್ಕೆ ಪೊಲೀಸ್ ಕಮಿಷನರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನಗದು ಬಹುಮಾನ ಘೋಷಿಸಿದ್ದಾರೆ.
ನಗರದಲ್ಲಿ ಯುವಜನತೆಯನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಮಾದಕ ವಸ್ತುಗಳ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹುಬ್ಬಳ್ಳಿ ಪೊಲೀಸರ ಈ ಕಾರ್ಯಾಚರಣೆ ಮಹತ್ವದ ಯಶಸ್ಸು ಸಾಧಿಸಿದೆ. ಮಾದಕ ವಸ್ತುಗಳ ಜಾಲದ ಬೇರುಗಳನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.
ಕ್ಷಣ ಕ್ಷಣದ ಸುದ್ದಿಗಾಗಿ ವಿಕ್ಷೀಸಿ ಮಾಯ್ ಪಬ್ಲಿಕ್ ಸಮಾಚಾರ.
ಸ್ಥಳ: ಹುಬ್ಬಳ್ಳಿ (Hubli) | ವರದಿಗಾರರು: girish.p.s
ADVERTISEMENT
ಈ ಸುದ್ದಿಯನ್ನು ಶೇರ್ ಮಾಡಿ (Share this Story)
ವಾಟ್ಸಾಪ್, ಫೇಸ್ಬುಕ್ ಮತ್ತು ಸ್ನೇಹಿತರೊಂದಿಗೆ ಈ ಮಾಹಿತಿ ಹಂಚಿಕೊಳ್ಳಿ