ಅಕ್ರಮವಾಗಿ ಸಂಗ್ರಹಿಸಿದ್ದ 1,000 ಕೆ.ಜಿ. ಪಡಿತರ ಅಕ್ಕಿ ಜಪ್ತಿ; ಓರ್ವ ಆರೋಪಿ ಬಂಧನ!

Spread the love

ಚಾಮರಾಜನಗರ: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ನೀಡಿರುವ ಸೂಚನೆಯಂತೆ ತೆರಕಣಾಂಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1,000 ಕೆ.ಜಿ. ಪಡಿತರ ಅಕ್ಕಿಯನ್ನು ಜಪ್ತಿ ಮಾಡಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ನವೆಂಬರ್ 3, 2026ರಂದು ಗುಂಡ್ಲುಪೇಟೆ ತಾಲೂಕು ಕಚೇರಿಯ ಆಹಾರ ನಿರೀಕ್ಷಕ ಎಂ.ಪಿ. ಅರವಿಂದ ಅವರು ನೀಡಿದ ದೂರಿನ ಮೇರೆಗೆ ತೆರಕಣಾಂಬಿ ಪೊಲೀಸ್ ಠಾಣೆಯ ಪಿಎಸ್ಐ ಕೆ.ಎಂ. ಮಹೇಶ್ ಅವರು ಪೊಲೀಸ್ ಸಿಬ್ಬಂದಿಯೊಂದಿಗೆ ಕಳ್ಳರ ಹುಂಡಿ ಗೇಟ್ ಸಮೀಪ ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದು, ಸಿಕಂದರ್ ಅಹಮದ್ ಬಿನ್ ಲೇಟ್ ಸರ್ತಾಜ್ ಅಹಮದ್ (40), ಗುಂಡ್ಲುಪೇಟೆ ನಿವಾಸಿಯನ್ನು ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಒಟ್ಟು 20 ಮೂಟೆಗಳಲ್ಲಿ ಸಂಗ್ರಹಿಸಲಾಗಿದ್ದ 1,000 ಕೆ.ಜಿ. ಪಡಿತರ ಅಕ್ಕಿ, ಅಂದಾಜು ₹15 ಸಾವಿರ ಮೌಲ್ಯದ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಿದ್ದ KA-10-5607 ನೋಂದಣಿ ಸಂಖ್ಯೆಯ ಮಹೀಂದ್ರ ಮ್ಯಾಕ್ಸಿಮೋ ಗೂಡ್ಸ್ ವಾಹನವನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಮೊ.ಸಂ. 101/2026ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಪೊಲೀಸ್ ಅಧೀಕ್ಷಕ ಮುತ್ತುರಾಜು ಎಂ., ಐಪಿಎಸ್ ಅವರು ಕಾರ್ಯಾಚರಣೆಯನ್ನು ಶ್ಲಾಘಿಸಿ, ಮುಂದಿನ ದಿನಗಳಲ್ಲಿಯೂ ಅಕ್ರಮ ಚಟುವಟಿಕೆಗಳನ್ನು ಪತ್ತೆಹಚ್ಚಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *