ಮೆಕ್ಕೆಜೋಳಕ್ಕೆ ಕ್ವಿಂಟಲ್‌ಗೆ ₹3,000 ನಿಗದಿ, ಖರೀದಿ ಕೇಂದ್ರಕ್ಕೆ ಒತ್ತಾಯಿಸಿ ನ. ನಾಳೆ(AIKKMS) ನಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

Spread the love

ರೈತರ ಎಲ್ಲ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆಗೆ ಆಗ್ರಹ

ಹುಬ್ಬಳ್ಳಿ: ನವೆಂಬರ್ 23, 2025: ರೈತ ವಿರೋಧಿ ನೀತಿಗಳ ವಿರುದ್ಧ ಸಮರ ಸಾರಿರುವ ಅಖಿಲ ಭಾರತ ಕಿಸಾನ್ ಖೇತ್ ಮಜ್ದೂರ್ ಸಂಘಟನೆ (AIKKMS), ರೈತರ ಮೆಕ್ಕೆಜೋಳಕ್ಕೆ ಕೂಡಲೇ ಖರೀದಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಕ್ವಿಂಟಲ್‌ಗೆ ಕನಿಷ್ಠ ರೂ. 3,000 ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ.

​ಧಾರವಾಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಈ ಪ್ರತಿಭಟನೆಯು ನಾಳೆ, ಅಂದರೆ ನವೆಂಬರ್ 24, 2025 ರಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ತಹಸೀಲ್ದಾರ್ ಕಚೇರಿ ಎದುರು ನಡೆಯಲಿದೆ.

​ಸಂಘಟನೆಯ ಪ್ರಮುಖ ಬೇಡಿಕೆಗಳಲ್ಲಿ, ಮೆಕ್ಕೆಜೋಳಕ್ಕೆ ಖರೀದಿ ಕೇಂದ್ರ ತೆರೆಯುವುದರ ಜೊತೆಗೆ, ರೈತರು ಬೆಳೆಯುವ ಎಲ್ಲಾ ಬೆಳೆಗಳಿಗೂ ವೈಜ್ಞಾನಿಕ ಬೆಂಬಲ ಬೆಲೆ ಘೋಷಿಸಬೇಕು ಹಾಗೂ ಬಾಕಿ ಉಳಿದಿರುವ ಎಲ್ಲಾ ರೈತರಿಗೆ ತಕ್ಷಣವೇ ಬೆಳೆ ವಿಮೆ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ.

​ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಲತಾಯಿ ಧೋರಣೆ ಮತ್ತು ಬೆಂಬಲ ಬೆಲೆಯ ವಿಚಾರದಲ್ಲಿನ ನಿರ್ಲಕ್ಷ್ಯದಿಂದ ಕಂಗೆಟ್ಟಿರುವ ಅನ್ನದಾತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ AIKKMS ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ ಸಂಘಟನಾ ಪ್ರತಿನಿಧಿಗಳನ್ನು 7411516670, 8553363832. ಸಂಪರ್ಕಿಸಿ

Leave a Reply

Your email address will not be published. Required fields are marked *