ಗಣೇಶ-ಈದ್ ಮಿಲಾದ್: ಹಬ್ಬದ ನಿಮಿತ್ತ ಧಾರವಾಡ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ

Spread the love

ಧಾರವಾಡ: ಗಣೇಶ ಚತುರ್ಥಿ ಮತ್ತು ಈದ್-ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ಹೊರತುಪಡಿಸಿ) ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಆದೇಶ ಹೊರಡಿಸಿದ್ದಾರೆ.

ಈ ಆದೇಶದ ಪ್ರಕಾರ, ಆಗಸ್ಟ್ 26ರ ರಾತ್ರಿ 11:59 ರಿಂದ ಆಗಸ್ಟ್ 28ರ ಬೆಳಿಗ್ಗೆ 6:00 ಗಂಟೆಯವರೆಗೆ, ಆಗಸ್ಟ್ 28ರ ರಾತ್ರಿ 11:59 ರಿಂದ ಆಗಸ್ಟ್ 30ರ ಬೆಳಿಗ್ಗೆ 6:00 ಗಂಟೆಯವರೆಗೆ, ಆಗಸ್ಟ್ 30ರ ರಾತ್ರಿ 11:59 ರಿಂದ ಸೆಪ್ಟೆಂಬರ್ 1ರ ಬೆಳಿಗ್ಗೆ 6:00 ಗಂಟೆಯವರೆಗೆ, ಸೆಪ್ಟೆಂಬರ್ 1ರ ರಾತ್ರಿ 11:59 ರಿಂದ ಸೆಪ್ಟೆಂಬರ್ 3ರ ಬೆಳಿಗ್ಗೆ 6:00 ಗಂಟೆಯವರೆಗೆ, ಮತ್ತು ಸೆಪ್ಟೆಂಬರ್ 3ರ ರಾತ್ರಿ 11:59 ರಿಂದ ಸೆಪ್ಟೆಂಬರ್ 7ರ ಬೆಳಿಗ್ಗೆ 6:00 ಗಂಟೆಯವರೆಗೆ ಮದ್ಯಪಾನ, ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಲಾಗಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲೂ ನಿಷೇಧ
ಇದೇ ರೀತಿ, ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲೂ ಮದ್ಯ ಮಾರಾಟ ನಿಷೇಧಿಸಿ ಪೊಲೀಸ್ ಕಮಿಷನರ್ ಮತ್ತು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಮಹಾನಗರ ವ್ಯಾಪ್ತಿಯಲ್ಲಿ ಆಗಸ್ಟ್ 26ರ ರಾತ್ರಿ 11:59 ರಿಂದ ಆಗಸ್ಟ್ 28ರ ಬೆಳಿಗ್ಗೆ 6:00 ಗಂಟೆಯವರೆಗೆ ಮತ್ತು ಆಗಸ್ಟ್ 30ರ ರಾತ್ರಿ 11:59 ರಿಂದ ಸೆಪ್ಟೆಂಬರ್ 1ರ ಬೆಳಿಗ್ಗೆ 6:00 ಗಂಟೆಯವರೆಗೆ, ಸೆಪ್ಟೆಂಬರ್ 1ರ ರಾತ್ರಿ 11:59 ರಿಂದ ಸೆಪ್ಟೆಂಬರ್ 3ರ ಬೆಳಿಗ್ಗೆ 6:00 ಗಂಟೆಯವರೆಗೆ ಹಾಗೂ ಸೆಪ್ಟೆಂಬರ್ 3ರ ರಾತ್ರಿ 11:59 ರಿಂದ ಸೆಪ್ಟೆಂಬರ್ 7ರ ಬೆಳಿಗ್ಗೆ 6:00 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಲಾಗಿದೆ.
ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *