ಅರೇಮುರಾಳ:ನಿರಂತರ ಮಳೆಗೆ ಮನೆ ಕುಸಿತ: ನಾಲ್ವರಿಗೆ ಗಂಭೀರ ಗಾಯ,

Spread the love

ಮುದ್ದೇಬಿಹಾಳ: ತಾಲೂಕಿನ ಅರೇಮುರಾಳ ಗ್ರಾಮದಲ್ಲಿ ಸುರಿದ ನಿರಂತರ ಮಳೆಗೆ ಹಳೆಯ ಮನೆಯೊಂದು ಕುಸಿದು ಬಿದ್ದಿದ್ದು, ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಂದಾಯ ಇಲಾಖೆಯ ನಿರ್ಲಕ್ಷ್ಯಕ್ಕೆ ಆಕ್ರೋಶ
ಘಟನೆಯಲ್ಲಿ ರುದ್ರಪ್ಪ ಬಂಡಿವಡ್ಡರ, ಮಲ್ಲಮ್ಮ ಬಂಡಿವಡ್ಡರ, ಶಾರದಾ ಬಂಡಿವಡ್ಡರ, ಮತ್ತು ರುಶಾಂತ ಬಂಡಿವಡ್ಡರ ಗಾಯಗೊಂಡಿದ್ದು, ಮನೆಯಲ್ಲಿದ್ದ ಬಹುತೇಕ ಎಲ್ಲಾ ಸಾಮಗ್ರಿಗಳು ಮತ್ತು ದೈನಂದಿನ ಬಳಕೆ ವಸ್ತುಗಳು ಸಂಪೂರ್ಣವಾಗಿ ನಾಶವಾಗಿವೆ. ಮಧ್ಯರಾತ್ರಿ ಘಟನೆ ನಡೆದಿದ್ದರೂ, ಗ್ರಾಮ ಪಂಚಾಯಿತಿ ಅಥವಾ ಕಂದಾಯ ಇಲಾಖೆಯ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದಿರುವುದು ಗ್ರಾಮಸ್ಥರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ನಡಹಳ್ಳಿಯಿಂದ ಸಾಂತ್ವನ
ಅಧಿಕಾರಿಗಳ ನಿರ್ಲಕ್ಷ್ಯದ ನಡುವೆಯೂ, ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ, ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದರು. ಅಲ್ಲದೇ, ಅಗತ್ಯ ಪಡಿತರವನ್ನು ವಿತರಿಸಿ ಮಾನವೀಯತೆ ಮೆರೆದರು.

ಈ ಸಂದರ್ಭದಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಕೂಡಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

Leave a Reply

Your email address will not be published. Required fields are marked *