
ಹುಬ್ಬಳ್ಳಿ ಗ್ರಾಮೀಣ: ಕೊಟ್ಟಗುಣಸಿಯ ಪ್ರೇರಣಾ ಕಾಲೇಜಿನಲ್ಲಿ ನಡೆದ ಹುಬ್ಬಳ್ಳಿ ಗ್ರಾಮೀಣ ವಲಯದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶಿರುಗುಪ್ಪಿ ಗ್ರಾಮದ ಪಂಡಿತ್ ನೆಹರೂ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಖೋ ಖೋ ಮತ್ತು ಕಬಡ್ಡಿ ಕ್ರೀಡಾ ವಿಭಾಗಗಳಲ್ಲಿ ಈ ಶಾಲೆಯ ವಿದ್ಯಾರ್ಥಿನಿಯರ ತಂಡವು ಪ್ರಥಮ ಸ್ಥಾನ ಗಳಿಸುವ ಮೂಲಕ ಈ ಸಾಧನೆ ಮಾಡಿದೆ. ವಿದ್ಯಾರ್ಥಿನಿಯರ ಈ ಯಶಸ್ಸಿಗೆ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ-ಶಿಕ್ಷಕಿಯರು ಅಭಿನಂದಿಸಿದ್ದಾರೆ.
ಕ್ರೀಡೆಯಲ್ಲಿ ತೋರಿದ ಉತ್ತಮ ಕೌಶಲ್ಯ ಮತ್ತು ಸಂಘಟಿತ ಪ್ರಯತ್ನವು ಈ ಯಶಸ್ಸಿಗೆ ಕಾರಣವಾಗಿದ್ದು, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವ ಭರವಸೆಯನ್ನು ವಿದ್ಯಾರ್ಥಿನಿಯರು ಮೂಡಿಸಿದ್ದಾರೆ. ಶಾಲೆಯ ಎಲ್ಲ ಸಿಬ್ಬಂದಿ ವರ್ಗವು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳಿಗೆ ಶುಭ ಹಾರೈಸಿದೆ.

