ಸೋಮವಾರ, 23 Nov 2026 | ಕನ್ನಡ & ರಾಷ್ಟ್ರೀಯ ಸುದ್ದಿ ಪೋರ್ಟಲ್
ಮಂಡ್ಯ

ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ 60ನೇ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ವಿತರಣೆ, ಸಸಿ ನೆಟ್ಟು ಸಂಭ್ರಮ

30-ಸೆಕೆಂಡ್ ಮುಖ್ಯಾಂಶಗಳು (30-Sec AI Summary)
  • ಪ್ರಮುಖ ಬೆಳವಣಿಗೆ: ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ 60ನೇ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ವಿತರಣೆ, ಸಸಿ ನೆಟ್ಟು ಸಂಭ್ರಮ
  • Spread the love ಮಳವಳ್ಳಿ: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ನಾರಾಯಣಗೌಡರ 60ನೇ ಹುಟ್ಟುಹಬ್ಬದ ಅಂಗವಾಗಿ ಮಳವಳ್ಳಿ ತಾಲ್ಲೂಕು ಘಟಕದ ವತಿಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ…
  • ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮತ್ತು ಸ್ಥಳೀಯ ಮೂಲಗಳಿಂದ ಸಮಗ್ರ ವರದಿ ಪರಿಶೀಲನೆ.
ಸುದ್ದಿ ಆಲಿಸಿ • ಸಿದ್ಧವಾಗಿದೆ (Ready)
AI ಆಡಿಯೋ ನ್ಯೂಸ್‌ರೂಮ್ • ಕನ್ನಡ & English
ವೇಗ:
Spread the love

ಮಳವಳ್ಳಿ: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ನಾರಾಯಣಗೌಡರ 60ನೇ ಹುಟ್ಟುಹಬ್ಬದ ಅಂಗವಾಗಿ ಮಳವಳ್ಳಿ ತಾಲ್ಲೂಕು ಘಟಕದ ವತಿಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಹಾಗೂ ಸಸಿ ನೆಡುವ ಮೂಲಕ ಅರ್ಥಪೂರ್ಣವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಕರವೇ ತಾಲ್ಲೂಕು ಅಧ್ಯಕ್ಷ ಅಪ್ಪೇಗೌಡ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿದ್ದ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ಬಳಿಕ ಮಾತನಾಡಿದ ಅವರು, ಕನ್ನಡ ನಾಡು, ನುಡಿ, ಸಂಸ್ಕೃತಿಯ ಉಳಿವು ಮತ್ತು ಬೆಳವಣಿಗೆಗಾಗಿ ನಿರಂತರ ಹೋರಾಟ ನಡೆಸುತ್ತಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ 60ನೇ ವರ್ಷದ ಹುಟ್ಟುಹಬ್ಬವನ್ನು ತಾಲ್ಲೂಕು ಘಟಕದ ವತಿಯಿಂದ ವಿಶೇಷವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ನಾರಾಯಣಗೌಡರು ಇನ್ನೂ ಹೆಚ್ಚಿನ ಕಾಲ ಆರೋಗ್ಯವಂತರಾಗಿ ಕನ್ನಡದ ಪರ ಹೋರಾಟಗಳನ್ನು ಮುನ್ನಡೆಸುವ ಶಕ್ತಿ ಹಾಗೂ ಆಯುಷ್ಯವನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದರು. ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಎಲ್ಲರಿಗೂ ಮಾದರಿಯಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಮಹಿಳಾ ಅಧ್ಯಕ್ಷೆ ವಿಜಯ, ಹಲಗೂರು ಹೋಬಳಿ ಅಧ್ಯಕ್ಷ ಗಂಗರಾಜು, ಉಪಾಧ್ಯಕ್ಷ ಚನ್ನೇಗೌಡ, ತಿಮ್ಮಯ್ಯ, ಪುಟ್ಟಸ್ವಾಮಿಗೌಡ, ಸಂಪತ್ತು, ಮಾದೇಶ, ಮಹೇಶ್, ಮಹದೇವು, ನಾಗರಾಜು, ವೈ.ಆರ್. ಮಲ್ಲಿಕಾರ್ಜುನಸ್ವಾಮಿ ಸೇರಿದಂತೆ ಕರವೇ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ADVERTISEMENT