ಧಾರವಾಡ, ಜೂ.12: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಧಾರವಾಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಗಳ ವಾಣಿಜ್ಯ ವಿಭಾಗದ ಖಾಲಿ ಉಳಿದಿರುವ ಸೀಟುಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುಬ್ಬಳ್ಳಿಯ ಅಂಚಟಗೇರಿಯಲ್ಲಿರುವ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಧಾರವಾಡದ ಜಯನಗರದಲ್ಲಿರುವ ಯುವರತ್ನ ಕರಿಯರ್ ಅಕಾಡೆಮಿ ಸಮೀಪದ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಆಸಕ್ತ ಹಾಗೂ ಸೂಕ್ತ ವಿದ್ಯಾರ್ಹತೆ ಹೊಂದಿರುವ ವಿದ್ಯಾರ್ಥಿಗಳು ಆಫ್‌ಲೈನ್ ಮೂಲಕ ಜೂನ್ 22, 2026ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 0836-2971590, 8310998779 ಹಾಗೂ 7337768683 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

