ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅರ್ಜಿ ಆಹ್ವಾನ: ಆಗಸ್ಟ್ 31ರವರೆಗೆ ನೋಂದಣಿಗೆ ಅವಕಾಶ

Spread the love

ಧಾರವಾಡ, ಜು.7: 2026-27ನೇ ಸಾಲಿನ ಮುಂಗಾರು ಹಂಗಾಮಿಗಾಗಿ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ರೈತರ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಹ ರೈತರು ಆಗಸ್ಟ್ 31, 2026ರೊಳಗೆ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳುವಂತೆ ತೋಟಗಾರಿಕೆ ಇಲಾಖೆ ತಿಳಿಸಿದೆ.

ಈ ಯೋಜನೆಯಡಿ ಕಲಘಟಗಿ ತಾಲೂಕಿನ ಎಲ್ಲಾ ಹೋಬಳಿಗಳಲ್ಲಿ ಮಾವು ಹಾಗೂ ದುಮ್ಮವಾಡ ಹೋಬಳಿಯಲ್ಲಿ ಹಸಿ ಮೆಣಸಿನಕಾಯಿ ಬೆಳೆಯುವ ರೈತರು ಬೆಳೆ ವಿಮೆ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ. ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳಲು ರೈತರು ಕಡ್ಡಾಯವಾಗಿ ಫಾರ್ಮರ್ ಐಡಿ (FID) ಹೊಂದಿರಬೇಕು.

ನೋಂದಣಿಗಾಗಿ ನಿಗದಿತ ಅರ್ಜಿ ನಮೂನೆ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಬೆಳೆ ವಿವರ ಹೊಂದಿರುವ ಪಹಣಿ, ಸ್ವಯಂ ದೃಢೀಕರಣ ಪತ್ರ, ನಾಮಿನಿ ವಿವರ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ಸಲ್ಲಿಸಬೇಕು. ರೈತರು ತಮ್ಮ ಸಮೀಪದ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ (CSC) ಅಥವಾ ಗ್ರಾಮ್ ಒನ್ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಕಲಘಟಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿ.ಪಂ) ಕಚೇರಿ ಅಥವಾ ಸಮೀಪದ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ ಹಾಗೂ ಗ್ರಾಮ್ ಒನ್ ಕೇಂದ್ರಗಳನ್ನು ಸಂಪರ್ಕಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *