
ಕುಂದಗೋಳ: ತಾಲ್ಲೂಕಿನಲ್ಲಿ 2025-26ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸುವ ನಿಮಿತ್ತ ಪೂರ್ವಭಾವಿ ಸಭೆಯನ್ನು ಸೆಪ್ಟೆಂಬರ್ 11, ರಂದು ಬೆಳಿಗ್ಗೆ 11 ಗಂಟೆಗೆ ತಹಶೀಲ್ದಾರರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಅಕ್ಟೋಬರ್ 7, 2025 ರಂದು ನಡೆಯಲಿರುವ ಜಯಂತಿ ಆಚರಣೆಯ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.
ತಾಲ್ಲೂಕಿನ ಎಲ್ಲಾ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ಮುಖಂಡರುಗಳು ಈ ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಮಟ್ಟದ ವಾಲ್ಮೀಕಿ ಜಯಂತಿ ಆಚರಣಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಮಿನಾಕ್ಷಿ ಗುದಗಿ ಕೋರಿದ್ದಾರೆ.

