ಹುಬ್ಬಳ್ಳಿ-ಧಾರವಾಡ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ರಜತ ಉಳ್ಳಾಗಡ್ಡಿಮಠ ಅಧ್ಯಕ್ಷ, ಪ್ರೇಮನಾಥ ಚಿಕ್ಕತುಂಬಳ ಉಪಾಧ್ಯಕ್ಷ

Spread the love

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಯುವ ಮುಖಂಡ ರಜತ ಉಳ್ಳಾಗಡ್ಡಿಮಠ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ಹಾಗೂ ಪ್ರೇಮನಾಥ ಚಿಕ್ಕತುಂಬಳ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಸರ್ಕಾರದ ಆದೇಶದಂತೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ.

ನೂತನ ನೇಮಕಾತಿಯಿಂದ ಇಬ್ಬರು ಯುವ ನಾಯಕರಿಗೆ ಸಾರ್ವಜನಿಕ ಜೀವನದಲ್ಲಿ ಮತ್ತಷ್ಟು ಜವಾಬ್ದಾರಿ ದೊರೆತಂತಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಅಭಿನಂದನೆ ಸಲ್ಲಿಸಲಾಗಿದೆ.

Leave a Reply

Your email address will not be published. Required fields are marked *