ಹನೂರು: ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಹನೂರು ಸೇವಾ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ರಕ್ಷಾಬಂಧನ ಕಾರ್ಯಕ್ರಮವನ್ನು ಭಕ್ತಿಭಾವದಿಂದ ವಿಧಿವತ್ತಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಹನೂರು ಸೇವಾ ಕೇಂದ್ರದ ಸಂಚಾಲಕಿ ರಾಜಯೋಗಿನಿ ಬಿಂದು ಅಕ್ಕನವರು, ಪರಮಾತ್ಮನನ್ನು ನೆನಪಿಸಿಕೊಳ್ಳುವುದರೊಂದಿಗೆ ಶ್ರೇಷ್ಠ ಕರ್ಮಗಳನ್ನು ಮಾಡುವ ಮೂಲಕ ಶ್ರೀಕೃಷ್ಣನಲ್ಲಿರುವ ಗುಣಗಳು ಹಾಗೂ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬಹುದು. ಇದರಿಂದ ಪರಮಾತ್ಮನ ರಕ್ಷಣೆಯನ್ನು ಪಡೆಯಲು ಸಾಧ್ಯ ಎಂದು ತಿಳಿಸಿದರು.
ಸ್ವಾಮಿ ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಮಧುಸೂದನ್ ಅಣ್ಣನವರು ಮಾತನಾಡಿ, ಕೃಷ್ಣ ಜನ್ಮಾಷ್ಟಮಿ ಹಬ್ಬವು ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಮೌಲ್ಯಗಳನ್ನು ಎತ್ತಿ ತೋರಿಸುವಂತಹ ಮಹತ್ವದ ಹಬ್ಬವಾಗಿದೆ ಎಂದು ಹೇಳಿ ಶುಭ ಹಾರೈಸಿದರು.
ಹತ್ತಿ ಪುಟ್ಟಸ್ವಾಮಿ ಅಣ್ಣನವರು ಮಾತನಾಡಿ, ಇಂದಿನ ಒತ್ತಡದ ಜೀವನದಲ್ಲಿ ಮಾನಸಿಕ ನೆಮ್ಮದಿ ಹಾಗೂ ಒತ್ತಡಮುಕ್ತ ಜೀವನ ನಡೆಸಲು ಇಂತಹ ರಾಜಯೋಗ ಮಂದಿರಗಳು ಅತ್ಯವಶ್ಯಕವಾಗಿವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಕುರುಬ ಸಂಘದ ಅಧ್ಯಕ್ಷ ಶಿವಪ್ಪಣ್ಣನವರು, ಶಿಕ್ಷಕರಾದ ರಾಜು ಅಣ್ಣನವರು, ಸತ್ಯನಾರಾಯಣಣ್ಣನವರು, ಶೋಭಕ್ಕನವರು, ದಿವ್ಯಕ್ಕನವರು, ಸುರೇಶಣ್ಣನವರು, ಗಂಗಕ್ಕನವರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
. ವರದಿ :ಕಾರ್ತಿಕ್ ಗೌಡ ಹನೂರು

