ಧಾರವಾಡದಲ್ಲಿ ಮತ್ತೊಬ್ಬ ಸರ್ಕಾರಿ ನೌಕರ ಆತ್ಮಹತ್ಯೆ: ಅರಣ್ಯ ಇಲಾಖೆಯ ನೌಕರ ವಿಠಲ ಜೋನಿ ಸಾವು

Spread the love

ಧಾರವಾಡದಲ್ಲಿ ಮತ್ತೊಬ್ಬ ಸರ್ಕಾರಿ ನೌಕರ ಆತ್ಮಹತ್ಯೆ: ಅರಣ್ಯ ಇಲಾಖೆಯ ನೌಕರ ವಿಠಲ ಜೋನಿ ಸಾವು

ಧಾರವಾಡ: ಧಾರವಾಡದಲ್ಲಿ ಮತ್ತೊಬ್ಬ ಸರ್ಕಾರಿ ನೌಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಠಲ ಜೋನಿ (38) ಮೃತಪಟ್ಟವರು. ನಗರದ ಕುಮಾರೇಶ್ವರ ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ವಿಠಲ ಜೋನಿ ಅವರು ಕಲಘಟಗಿ ವಿಭಾಗದಲ್ಲಿ ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದ ಬಳಿಕ ಧಾರವಾಡ ಉಪನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಠಲ ಜೋನಿ ಅವರ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಧಾರವಾಡ ಉಪನಗರ ಠಾಣೆಯ ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *