
ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು, ನಾಲ್ಕನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ನಾಲ್ಕನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿನತ್ತ ದಾಪುಗಾಲು ಹಾಕಿದ್ದಾರೆ.
ನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು 6,118 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರು 4,370 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ನಾಲ್ಕನೇ ಸುತ್ತಿನಲ್ಲಿ ಸಂಕನೂರ ಅವರು 1,748 ಮತಗಳ ಮುನ್ನಡೆ ಸಾಧಿಸಿದ್ದಾರೆ.
ನಾಲ್ಕನೇ ಸುತ್ತಿನ ಮತ ಎಣಿಕೆ ಮುಕ್ತಾಯದ ವೇಳೆಗೆ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಒಟ್ಟು 6,867 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮುಂದಿನ ಸುತ್ತುಗಳ ಮತ ಎಣಿಕೆಯತ್ತ ಅಭ್ಯರ್ಥಿಗಳು ಹಾಗೂ ಬೆಂಬಲಿಗರ ಗಮನ ನೆಟ್ಟಿದ್ದು, ಸಂಕನೂರ ಅವರ ನಿರಂತರ ಮುನ್ನಡೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

