ಶನಿವಾರ, 21 Nov 2026 | ಕನ್ನಡ & ರಾಷ್ಟ್ರೀಯ ಸುದ್ದಿ ಪೋರ್ಟಲ್
ಚಾಮರಾಜನಗರ

ಮನೆ ಮುಂದೆ ಆಟವಾಡುತ್ತಿದ್ದ 9 ವರ್ಷದ ಬಾಲಕಿಗೆ ಬೀದಿ ನಾಯಿಯ ದಾಳಿ; ತೀವ್ರ ಗಾಯ

30-ಸೆಕೆಂಡ್ ಮುಖ್ಯಾಂಶಗಳು (30-Sec AI Summary)
  • ಪ್ರಮುಖ ಬೆಳವಣಿಗೆ: ಮನೆ ಮುಂದೆ ಆಟವಾಡುತ್ತಿದ್ದ 9 ವರ್ಷದ ಬಾಲಕಿಗೆ ಬೀದಿ ನಾಯಿಯ ದಾಳಿ; ತೀವ್ರ ಗಾಯ
  • Spread the love Recent Views 10 ಹನೂರು: ಪಟ್ಟಣದ ಮಾರುತಿ ನಗರದ ಮೊದಲನೇ ಕ್ರಾಸ್‌ನಲ್ಲಿ ಶನಿವಾರ ಸಂಜೆ ಸುಮಾರು 4 ಗಂಟೆ ವೇಳೆಗೆ ಹೃದಯವಿದ್ರಾವಕ ಘಟನೆ…
  • ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮತ್ತು ಸ್ಥಳೀಯ ಮೂಲಗಳಿಂದ ಸಮಗ್ರ ವರದಿ ಪರಿಶೀಲನೆ.
ಸುದ್ದಿ ಆಲಿಸಿ • ಸಿದ್ಧವಾಗಿದೆ (Ready)
AI ಆಡಿಯೋ ನ್ಯೂಸ್‌ರೂಮ್ • ಕನ್ನಡ & English
ವೇಗ:
Spread the love

ಹನೂರು: ಪಟ್ಟಣದ ಮಾರುತಿ ನಗರದ ಮೊದಲನೇ ಕ್ರಾಸ್‌ನಲ್ಲಿ ಶನಿವಾರ ಸಂಜೆ ಸುಮಾರು 4 ಗಂಟೆ ವೇಳೆಗೆ ಹೃದಯವಿದ್ರಾವಕ ಘಟನೆ ನಡೆದಿದೆ. ಮನೆಯ ಮುಂದೆ ಆಟವಾಡುತ್ತಿದ್ದ 9 ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ಏಕಾಏಕಿ ದಾಳಿ ಮಾಡಿ ಕಚ್ಚಿದೆ. ನಾಯಿಯ ದಾಳಿಯಿಂದ ಬಾಲಕಿ ತೀವ್ರವಾಗಿ ಗಾಯಗೊಂಡಿದ್ದು, ವಿಪರೀತ ರಕ್ತಸ್ರಾವವಾಗಿದೆ. ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹನೂರು ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೀದಿಬೀದಿಗಳಲ್ಲಿ ಗುಂಪುಗುಂಪಾಗಿ ನಾಯಿಗಳು ಸಂಚರಿಸುತ್ತಿವೆ. ಇದರಿಂದ ಮಕ್ಕಳು, ಮಹಿಳೆಯರು ಹಾಗೂ ವೃದ್ಧರು ಮನೆಯಿಂದ ಹೊರಬರಲು ಭಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೀದಿ ನಾಯಿಗಳ ಕಾಟದಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಈ ಸಮಸ್ಯೆ ಕುರಿತು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಇಲ್ಲಿಯವರೆಗೆ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಬೀದಿ ನಾಯಿಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ADVERTISEMENT