ಬುಧವಾರ, 25 Nov 2026 | ಕರ್ನಾಟಕ & ರಾಷ್ಟ್ರೀಯ ಸುದ್ದಿ ಪೋರ್ಟಲ್
ಬುಧವಾರ, 25 Nov 2026 ವಿಶ್ವಾಸಾರ್ಹ ಕನ್ನಡ & ರಾಷ್ಟ್ರೀಯ ಸುದ್ದಿ ಜಾಲ
Dharwad

ಪತ್ರಕರ್ತ ಮಂಜುನಾಥ್ ಎನ್. ಶಿವಕ್ಕನವರ ಸುವರ್ಣ ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ರಾಜ್ಯ ಉಪಾಧ್ಯಕ್ಷರಾಗಿ ನೇಮಕ

30-ಸೆಕೆಂಡ್ ಮುಖ್ಯಾಂಶಗಳು (30-Sec AI Summary)
  • ಪ್ರಮುಖ ಬೆಳವಣಿಗೆ: ಪತ್ರಕರ್ತ ಮಂಜುನಾಥ್ ಎನ್. ಶಿವಕ್ಕನವರ ಸುವರ್ಣ ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ರಾಜ್ಯ ಉಪಾಧ್ಯಕ್ಷರಾಗಿ ನೇಮಕ
  • Spread the love ಕುಂದಗೋಳ: ಸುವರ್ಣ ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ರಾಜ್ಯ ಉಪಾಧ್ಯಕ್ಷರಾಗಿ ಕುಂದಗೋಳದ ಪತ್ರಕರ್ತ ಮಂಜುನಾಥ್ ಎನ್. ಶಿವಕ್ಕನವರ ಅವರನ್ನು ನೇಮಕ ಮಾಡಲಾಗಿದೆ.…
  • ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮತ್ತು ಸ್ಥಳೀಯ ಮೂಲಗಳಿಂದ ಸಮಗ್ರ ವರದಿ ಪರಿಶೀಲನೆ.
ಸುದ್ದಿ ಆಲಿಸಿ • ಸಿದ್ಧವಾಗಿದೆ (Ready)
AI ಆಡಿಯೋ ನ್ಯೂಸ್‌ರೂಮ್ • ಕನ್ನಡ & English
ವೇಗ:
Spread the love

ಕುಂದಗೋಳ: ಸುವರ್ಣ ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ರಾಜ್ಯ ಉಪಾಧ್ಯಕ್ಷರಾಗಿ ಕುಂದಗೋಳದ ಪತ್ರಕರ್ತ ಮಂಜುನಾಥ್ ಎನ್. ಶಿವಕ್ಕನವರ ಅವರನ್ನು ನೇಮಕ ಮಾಡಲಾಗಿದೆ.

ಮಾನವ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯ, ಶೋಷಿತ ಹಾಗೂ ಅಸಹಾಯಕರಿಗೆ ನ್ಯಾಯ ದೊರಕಿಸುವುದು ಮತ್ತು ಜನಸಾಮಾನ್ಯರಲ್ಲಿ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಸಂಸ್ಥೆಯ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕಾರ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸುವ ನಿಟ್ಟಿನಲ್ಲಿ ಮಂಜುನಾಥ್ ಎನ್. ಶಿವಕ್ಕನವರ ಅವರಿಗೆ ರಾಜ್ಯ ಉಪಾಧ್ಯಕ್ಷರ ಜವಾಬ್ದಾರಿ ನೀಡಲಾಗಿದೆ.

ಉಡುಪಿ ಕೃಷ್ಣ ಗುರೂಜಿ ಹಾಗೂ ಸಂಸ್ಥೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಗಣೇಶ್ ಗೌಡ್ರು ಅವರು ಪತ್ರಕರ್ತ ಮಂಜುನಾಥ್ ಎನ್. ಶಿವಕ್ಕನವರ ಅವರ ಸಾಮಾಜಿಕ ಕಳಕಳಿ, ಪತ್ರಿಕಾ ಕ್ಷೇತ್ರದಲ್ಲಿನ ಸೇವೆ ಹಾಗೂ ಜನಪರ ಕಾರ್ಯಗಳನ್ನು ಪರಿಗಣಿಸಿ ಈ ನೇಮಕ ಮಾಡಿದ್ದಾರೆ.

ಈ ನೇಮಕದ ಮೂಲಕ ಮಾನವ ಹಕ್ಕುಗಳ ಸಂರಕ್ಷಣೆ, ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಮತ್ತು ಗೌರವ ದೊರಕಿಸುವ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕಾರ್ಯಗಳನ್ನು ಕೈಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.

ADVERTISEMENT