
ಸಿಡಿಲು ಬಡಿದು ಯುವಕನೋರ್ವ ಸಾವು
ಕರ್ನಾಟಕ: ಯಾದರಿಗಿ ಜಿಲ್ಲೆ ಹುಣಸಗಿ ತಾಲೂಕಿನಲ್ಲಿ ಶುಕ್ರವಾರದಂದು ಸುರಿದ ಗುಡುಗು ಸಹಿತ ಮಳೆಯಿಂದಾಗಿ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಮದಲಿಂಗನಾಳ ಗ್ರಾಮದ ಜಮೀನಿನಲ್ಲಿ ನಡೆದಿದೆ.
ಪರಮಣ್ಣ ಸೋಮನಿಂಗಪ್ಪ ಕಕ್ಕೇರಿ(28) ಇತನು ಸ್ಥಳದಲ್ಲಿ ಮೃತಪಟ್ಟಿದ್ದರೆ, ಇನ್ನೋರ್ವ ವ್ಯಕ್ತಿ ಹಣಮಂತ ಸೋಮನಿಂಗಪ್ಪ ಕಕ್ಕೇರಿ(30) ಸಿಡಿಲಿನ ತೆರೆ ಬಡಿದು ಆಘಾತಕೀಡಾಗಿದ್ದು ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ಅಗತ್ಯ ಬಿದ್ದರೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ವೈದ್ಯಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ತಹಶೀಲ್ದಾರ ಎಂ.ಬಸವರಾಜ್ ಅವರು ತಿಳಿಸಿದ್ದಾರೆ.
ಜಮೀನುನಲ್ಲಿ ಕೆಲಸ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಕಂದಾಯ ನಿರೀಕ್ಷಕರು ಹಾಗೂ ಪೊಲೀಸ್ ಅಧಿಕಾರಿ ಭೇಟಿ ನೀಡಿ ಪರಿಶೀಲಿಸಿ ವರದಿ ಪಡೆದುಕೊಂಡಿದ್ದಾರೆ.

