ಹಾಸನ ದುರಂತ: ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ – ಸಚಿವ ಕೃಷ್ಣ ಬೈರೇಗೌಡ

Spread the love

ಹಾಸನ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಲಾರಿ ಹರಿದು 06 ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಚಿವರು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದೂ ಅವರು ತಿಳಿಸಿದ್ದಾರೆ. ಇದು ಅತ್ಯಂತ ನೋವಿನ ಘಳಿಗೆಯಾಗಿದ್ದು, ಅಪಘಾತದ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಅವರು ಸಂದೇಶ ನೀಡಿದ್ದಾರೆ.

Leave a Reply

Your email address will not be published. Required fields are marked *