‘ಪಂಚ ಗ್ಯಾರಂಟಿ’ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಶ್ರೀ ಸತೀಶ ಟಿ. ಕೊಬ್ಬಯ್ಯನವರ ನೇಮಕ - My Public Samachar ‘ಪಂಚ ಗ್ಯಾರಂಟಿ’ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಶ್ರೀ ಸತೀಶ ಟಿ. ಕೊಬ್ಬಯ್ಯನವರ ನೇಮಕ - My Public Samachar
Spread the love
Recent Views 7
ಕುಂದಗೋಳ: ನೇಮಕಾತಿ ಅಧಿಸೂಚನೆ
ಕುಂದಗೋಳ

ಜಿಲ್ಲಾ 'ಪಂಚ ಗ್ಯಾರಂಟಿ' — ಅನುಷ್ಠಾನ ಸಮಿತಿ

ಸನ್ಮಾನ್ಯ ಶ್ರೀ ಸತೀಶ್ ಟಿ. ಕೊಬ್ಬಯ್ಯನವರ ನೇಮಕ
ಅಧ್ಯಕ್ಷ — ಅನುಷ್ಠಾನ ಸಮಿತಿ
ಶ್ರೀ ಸತೀಶ್ ಟಿ. ಕೊಬ್ಬಯ್ಯನವರ ನೇಮಕ ಕುರಿತು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ "ಪಂಚ ಗ್ಯಾರಂಟಿ" ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕುಂದಗೋಳ ವಿಧಾನಸಭಾ ಕ್ಷೇತ್ರದ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಶ್ರೀ ಸತೀಶ ಟಿ. ಕೊಬ್ಬಯ್ಯನವರ ಅವರನ್ನು ನೇಮಕ ಮಾಡಲಾಗಿದೆ.

ಈ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಸತೀಶ ಕೊಬ್ಬಯ್ಯನವರ ಅವರು, ತಮ್ಮನ್ನು ಈ ಹುದ್ದೆಗೆ ನೇಮಕ ಮಾಡಿದ ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಂತೋಷ್ ಲಾಡ್, ಮತ್ತು ಗ್ಯಾರಂಟಿ ಪ್ರಾಧಿಕಾರದ ರಾಜ್ಯಾಧ್ಯಕ್ಷರಾದ ಶ್ರೀ ಎಚ್.ಎಂ. ರೇವಣ್ಣ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಅವರು ಕುಂದಗೋಳ ಮತ ಕ್ಷೇತ್ರದ ಮಾಜಿ ಶಾಸಕಿ ಶ್ರೀಮತಿ ಕುಸುಮಾವತಿ ಚ. ಶಿವಳ್ಳಿ, ಹಾಗೂ ಪಕ್ಷದ ಎಲ್ಲ ಹಿರಿಯ ನಾಯಕರು, ಮುಖಂಡರು ಮತ್ತು ಕಾರ್ಯಕರ್ತ ಬಂಧುಗಳಿಗೂ ತಮ್ಮ ಕೃತಜ್ಞತೆಗಳನ್ನು ವ್ಯಕ್ತಪಡಿಸಿದ್ದಾರೆ.

ಈ ಹುದ್ದೆಯ ಮೂಲಕ, ಸರ್ಕಾರದ ಜನಪರ ಯೋಜನೆಗಳನ್ನು ಕ್ಷೇತ್ರದ ಜನರಿಗೆ ಯಶಸ್ವಿಯಾಗಿ ತಲುಪಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಅವರು ತಿಳಿಸಿದ್ದಾರೆ.

  • ಈ ನೇಮಕಾತಿಯು ಕುಂದಗೋಳ ಕ್ಷೇತ್ರದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಹೊಸ ವೇಗ ನೀಡುವ ನಿರೀಕ್ಷೆ ಇದೆ.
ರಾಜ್ಯದ ಜನಪರ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಹೊಸ ಹೆಜ್ಜೆ.