ಕುಂದಗೋಳದಲ್ಲಿ ಪೌರಕಾರ್ಮಿಕರ ದಿನಾಚರಣೆ: ಪೌರಕಾರ್ಮಿಕರಿಂದ ರೋಗಿಗಳಿಗೆ ಹಣ್ಣು ವಿತರಣೆ

Spread the love

ಕುಂದಗೋಳ: ಪಟ್ಟಣ ಪಂಚಾಯತಿಯ ಪೌರಕಾರ್ಮಿಕರು ತಮ್ಮ ದಿನಾಚರಣೆಯ ಪ್ರಯುಕ್ತ ಮಂಗಳವಾರ ತಾಲ್ಲೂಕು ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ ಮಾನವೀಯತೆ ಮೆರೆದರು.

ಪೌರಕಾರ್ಮಿಕರು ತಾವು ಕೇವಲ ಪಟ್ಟಣದ ಸ್ವಚ್ಛತೆ ಕಾಪಾಡುವವರು ಮಾತ್ರವಲ್ಲದೆ, ಸಮಾಜದ ಬಗ್ಗೆಯೂ ಕಾಳಜಿ ಹೊಂದಿದ್ದೇವೆ ಎಂಬುದನ್ನು ಈ ಮೂಲಕ ತೋರಿಸಿಕೊಟ್ಟರು. ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳನ್ನು ಭೇಟಿ ಮಾಡಿ, ಅವರ ಆರೋಗ್ಯ ವಿಚಾರಿಸಿ, ಹಣ್ಣು-ಹಂಪಲುಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸಿ.ವಿ. ಕುಲಕರ್ಣಿ, ಇತರ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು. ಪೌರಕಾರ್ಮಿಕರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *