
ಧಾರವಾಡ:ಇಲ್ಲಿನ ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘವು (ಕ.ವಿ.ವ. ಸಂಘ) ತನ್ನ ೧೨೪ನೇ ಸರ್ವಸದಸ್ಯರ ವಾರ್ಷಿಕ ಸಭೆಯನ್ನು ಆಯೋಜಿಸಿದೆ.
ಸಭೆಯನ್ನು ನಾಳೆ ಸೆ 28 ರಂದು, ಭಾನುವಾರ, ಮುಂಜಾನೆ 11:00 ಗಂಟೆಗೆ ಸಂಘದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಕರೆಯಲಾಗಿದೆ.
ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶಂಕರ ಹಲಗತ್ತಿ ಅವರು, ಸಂಘದ ಎಲ್ಲಾ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಆಗಮಿಸಿ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

