
ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ಶನಿವಾರ ಶ್ರದ್ಧಾಂಜಲಿ ಸಭೆ ಆಯೋಜನೆ
ಧಾರವಾಡ: ಇತ್ತೀಚೆಗೆ ನಿಧನರಾದ ಪದ್ಮಭೂಷಣ ಮತ್ತು ಪದ್ಮಶ್ರೀ ಪುರಸ್ಕೃತ ಖ್ಯಾತ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿತ್ರಕಥೆಗಾರ ಡಾ. ಎಸ್. ಎಲ್. ಭೈರಪ್ಪ ಅವರಿಗೆ ಕರ್ನಾಟಕ ವಿದ್ಯಾವರ್ಧಕ ಸಂಘವು ಶ್ರದ್ಧಾಂಜಲಿ ಸಲ್ಲಿಸಲು ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಿದೆ.
ಅಕ್ಟೋಬರ್ 4, ಶನಿವಾರ ಸಂಜೆ 6 ಗಂಟೆಗೆ ಸಂಘದ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಸಾಹಿತ್ಯ ಮತ್ತು ಚಿಂತನೆಯ ಕ್ಷೇತ್ರದಲ್ಲಿ ಡಾ. ಭೈರಪ್ಪನವರ ಕೊಡುಗೆ ಅನನ್ಯವಾದುದು. ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕ ಬಡವಾಗಿದೆ ಎಂದು ತಿಳಿಸಿದ್ದಾರೆ.
ಈ ನುಡಿ ನಮನ ಕಾರ್ಯಕ್ರಮದಲ್ಲಿ ಸಾಹಿತಿಗಳು, ಚಿಂತಕರು, ಕಲಾವಿದರು, ವಿದ್ಯಾರ್ಥಿಗಳು, ತಾಯಂದಿರು, ಸಂಘದ ಆಜೀವ ಸದಸ್ಯರು, ಅಭಿಮಾನಿಗಳು ಹಾಗೂ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನಾಡಿನ ಈ ಮಹಾನ್ ಚೇತನಕ್ಕೆ ಗೌರವ ಸಲ್ಲಿಸಬೇಕೆಂದು ಸಂಘವು ಕೋರಿಕೊಂಡಿದೆ.

