

ಕುಂದಗೋಳ: ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯತ, ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಶ್ರೀ ಬಸವಣ್ಣಜ್ಜನವರ ಕಲ್ಯಾಣಪುರ ಮಠದ ಸಭಾ ಭವನದಲ್ಲಿ ಮಂಗಳವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದ ಗಣ್ಯರು, ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ವಿಶೇಷ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಷಣ್ಮುಖ ಶಿವಳ್ಳಿ, ವಾಲ್ಮೀಕಿಯವರು ಮನಃ ಪರಿವರ್ತನೆಗೊಂಡು ರಾಮಾಯಣ ಮಹಾಕಾವ್ಯ ರಚಿಸಿ ಜಗತ್ಪ್ರಸಿದ್ಧರಾದರು. ಅವರ ಆದರ್ಶ ತತ್ತ್ವಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಅಲ್ಲದೆ, ಪರಿಶಿಷ್ಟ ಪಂಗಡ (ಎಸ್ಟಿ) ಸಮುದಾಯಕ್ಕೆ ಸರ್ಕಾರದಿಂದ ದೊರೆಯುವ ಸೌಲಭ್ಯ ಮತ್ತು ಯೋಜನೆಗಳು ಸರಿಯಾಗಿ ತಲುಪುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಸಮಾಜದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅರ್ಹರಿಗೆ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.
ತಹಶೀಲ್ದಾರ್ ರಾಜು ಮಾವರಕ ಮಾತನಾಡಿ, ಮಹರ್ಷಿ ವಾಲ್ಮೀಕಿಯವರು ರಚಿಸಿದ ರಾಮಾಯಣ ಗ್ರಂಥವು ಸೂರ್ಯ-ಚಂದ್ರ ಇರುವವರೆಗೂ ಪ್ರಸ್ತುತವಾಗಿರುವ ಮಹತ್ತರ ಅಂಶಗಳನ್ನು ಒಳಗೊಂಡಿದೆ. ಯುವ ಪೀಳಿಗೆ ಇಂತಹ ಗ್ರಂಥಗಳನ್ನು ಓದುವ ಕಡೆ ಹೆಚ್ಚು ಗಮನ ಹರಿಸಬೇಕು. ಓದುವುದರಿಂದಲೇ ಸಾಧನೆ ಮಾಡಲು ಸಾಧ್ಯ ಎಂದರು.
ಎಸ್ಟಿ ಸಮಾಜದ ತಾಲ್ಲೂಕು ಅಧ್ಯಕ್ಷ ರಾಜು ದೊಡ್ಡಶಂಕರ ಮಾತನಾಡಿ, ವಾಲ್ಮೀಕಿ ಸಮುದಾಯ ಭವನದ ನಿರ್ಮಾಣಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಪ ಪಂಚಾಯತ ಯವರು ಈ ಬಗ್ಗೆ ಗಮನ ಹರಿಸಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದರು. ಅಲ್ಲದೇ, ಸರ್ಕಾರದ ಶೇ. 7ರಷ್ಟು ಸೌಲಭ್ಯವು ಸಮುದಾಯಕ್ಕೆ ಸರಿಯಾದ ರೀತಿಯಲ್ಲಿ ದೊರೆಯುತ್ತಿಲ್ಲ. ನಮ್ಮ ಸಮುದಾಯದ ಹೆಸರಿನಲ್ಲಿ ಬೇರೆಯವರು ಇದರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಘಟನೆಗಳು ನಿಲ್ಲಲು ಅಧಿಕಾರಿಗಳು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಕನ್ನಡ ಭಾಷಾ ಬೋಧಕರು ಹಾಗೂ ಸಂಪನ್ಮೂಲ ವ್ಯಕ್ತಿ ಶಿವಾನಂದ ಇಟಗಿಯವರು ಮಹರ್ಷಿ ವಾಲ್ಮೀಕಿ ಕುರಿತು ಉಪನ್ಯಾಸ ನೀಡಿದರು. ಇದೇ ಸಮಯದಲ್ಲಿ ಸಮಾಜದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಮಯದಲ್ಲಿ ಸಮಾಜದ ಮುಂಖಡರಾದ, ಶಿವಲಿಂಗಪ್ಪ ಕರೆಣ್ಣವರ, ಹಾಗೂ ಸಂಶಿ ಗ್ರಾ ಪಂ ಸದಸ್ಯರು ( ಮಾಜಿ ಅಧ್ಯಕ್ಷ) ರಾಜು ಪುಟ್ಟಣ್ಣನವರು ಸಹ ಮಹರ್ಷಿ ವಾಲ್ಮೀಕಿ ಯವರ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸತೀಶ ಕೊಬ್ಬಯ್ಯನವರ, ತಾ.ಪಂ. ಇಒ ಜಗದೀಶ ಕಮ್ಮಾರ, ಪುರಸಭೆ ಮುಖ್ಯಾಧಿಕಾರಿ ಸಿ.ವಿ. ಕುಲಕರ್ಣಿ, ಸಿಪಿಐ ಶಿವಾನಂದ ಅಂಭಿಗೇರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಮೀನಾಕ್ಷಿ ಗುದಗಿ, ಬಸವರಾಜ ನಾಯ್ಕರ, ರವೀಂದ್ರ ದೊಡ್ಡಮನಿ, ಈರಣ್ಣ ಗೌಡ ನಾಯ್ಕರ್, ಅಡವೆಪ್ಪ ಹೆಬಸೂರ, ಬಸವರಾಜ್ ತಳವಾರ್ ಅರ್ಜುನ್, ತಳವಾರ್ ಅಶೋಕ್, ಕುದರಿ, ಬಸವರಾಜ್ ದೀಪಾವಳಿ, ರಾಘವೇಂದ್ರ ನಾಯ್ಕರ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

