ಅಂತರ್ಜಲ ವೃದ್ಧಿಗೆ ಒತ್ತು: ‘ನೀರಿದ್ದರೆ ನಾಳೆ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

Spread the love

ಅಂತರ್ಜಲ ವೃದ್ಧಿಗೆ ಒತ್ತು: ‘ನೀರಿದ್ದರೆ ನಾಳೆ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಜಲ ಸಂರಕ್ಷಣೆಯ ಮಹತ್ವದ ಬಗ್ಗೆ ಅರಿವು ಮೂಡಿಸಲು ಸಣ್ಣ ನೀರಾವರಿ ಇಲಾಖೆಯು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ರಾಜ್ಯದಲ್ಲಿ ಜಲ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಯ ಕುರಿತು ಮಹತ್ವದ ಮಾತುಗಳನ್ನಾಡಿದರು.

ಕೆರೆ ತುಂಬಿಸುವಿಕೆಯಲ್ಲಿ ರಾಜ್ಯಕ್ಕೆ ಏಷ್ಯಾ ಮಟ್ಟದಲ್ಲಿ ಶ್ರೇಷ್ಠ ಸ್ಥಾನ

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ ಕಾರ್ಯ ನಮ್ಮ ರಾಜ್ಯದಲ್ಲಿ ನಡೆಯುತ್ತಿದೆ. ನಾಗರಿಕತೆ ಬೆಳೆದದ್ದು ಮತ್ತು ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖೆಯ ಮೂಲಕ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದು ಆರೋಗ್ಯಕರ ಸಂಗತಿ” ಎಂದು ಅಭಿಪ್ರಾಯಪಟ್ಟರು.

“ರಾಜ್ಯದಲ್ಲಿ 37 ಲಕ್ಷ ಬೋರ್‌ವೆಲ್‌ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್‌ವೆಲ್‌ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ.8 ರಷ್ಟು ಹೆಚ್ಚಿನ ಅಂತರ್ಜಲ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ. 144 ತಾಲ್ಲೂಕುಗಳನ್ನು ಹೊರತುಪಡಿಸಿ ಉಳಿದ ತಾಲ್ಲೂಕುಗಳಲ್ಲಿ ಅಂತರ್ಜಲದ ಪ್ರಮಾಣ ಕೊರತೆ ಇದೆ” ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಅಂತರ್ಜಲ ವೃದ್ಧಿಗೆ ಕೆ.ಸಿ. ವ್ಯಾಲ್ಯೂ ಯೋಜನೆ: ಸಿದ್ದರಾಮಯ್ಯ

“ಈ ಕಾರಣಕ್ಕಾಗಿಯೇ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವ ಕೆ.ಸಿ. ವ್ಯಾಲ್ಯೂ ಯೋಜನೆ ಜಾರಿ ಮಾಡಲಾಯಿತು. ಇದರಿಂದ ಈಗ ಅಂತರ್ಜಲ ವೃದ್ಧಿಯಾಗಿದೆ. ಆದರೆ, ಇದನ್ನೂ ವಿರೋಧಿಸುವವರು ಇದ್ದಾರೆ. ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ ಖರ್ಚು ಮಾಡಿದ್ದೇವೆ. ಇದರಿಂದ ಅಂತರ್ಜಲ ಉತ್ತಮವಾಗಿ ವೃದ್ಧಿಯಾಗಿದೆ” ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು ಸಚಿವ ಎಚ್.ಕೆ. ಪಾಟೀಲ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ, ಕೆಕೆಆರ್‌ಡಿಬಿ ಅಧ್ಯಕ್ಷ ಅಜಯ್ ಸಿಂಗ್, ಮ್ಯಾಗ್ಸೆಸ್ಸೇ ಪ್ರಶಸ್ತಿ ಪುರಸ್ಕೃತ ಪರಿಸರವಾದಿ ರಾಜೇಂದ್ರ ಸಿಂಗ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಅಭಿನಂದನೆ ಸಲ್ಲಿಸಿದ ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ

ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಮಂಗಳೂರು ದೇರೆಬೈಲ್‌ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ DBFOT ಆಧಾರದ ಮೇಲೆ ನಗದೀಕರಿಸಿ ಮತ್ತು ಅಭಿವೃದ್ಧಿಪಡಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡ ಹಿನ್ನೆಲೆ ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡರು ಮುಖ್ಯಮಂತ್ರಿಯವರನ್ನು ಭೇಟಿಸಿ ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿ, ಅಭಿನಂದನೆ ಸಲ್ಲಿಸಿದರು.

ಅಂತ್ಯೋದಯ, ಆದ್ಯತಾ ಕಾರ್ಡ್‌ದಾರರಿಗೆ ಇಂದಿರಾ ಆಹಾರ ಕಿಟ್ ವಿತರಣೆ

ರಾಜ್ಯದಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ (ಎಎವೈ ಮತ್ತು ಪಿಎಚ್‌ಹೆಚ್ ರೇಷನ್ ಕಾರ್ಡ್‌ದಾರರಿಗೆ) ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ ಮತ್ತು ಉಪ್ಪು ಒಳಗೊಂಡ ಇಂದಿರಾ ಆಹಾರ ಕಿಟ್‌ಗಳನ್ನು ವಿತರಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *