ನವಲಗುಂದ: ರೈತ ಮಹಿಳೆಯರಿಗೆ ಉಚಿತ ದೇಶಿ ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ

Spread the love

ನವಲಗುಂದ:2025-26ನೇ ಸಾಲಿನ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ, ಬೆಂಗಳೂರು ಇವರ ವತಿಯಿಂದ ನವಲಗುಂದ ತಾಲ್ಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ವಾರದ ದೇಶಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಯೋಜನೆಯ ಪ್ರಯೋಜನ ಪಡೆಯಲು ಇಚ್ಛಿಸುವ ರೈತ ಮಹಿಳೆಯರು ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಳನ್ನು ಪಡೆಯಲು ತಮ್ಮ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಪಶು ಆಸ್ಪತ್ರೆ, ನವಲಗುಂದ ಇಲ್ಲಿಗೆ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 30, ಸಂಜೆ 4:00 ಗಂಟೆಯಾಗಿರುತ್ತದೆ ಎಂದು ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ), ಪಶು ಆಸ್ಪತ್ರೆ, ನವಲಗುಂದ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

Leave a Reply

Your email address will not be published. Required fields are marked *