ನವೆಂಬರ್ 1 ರಂದು 70ನೇ ಕರ್ನಾಟಕ ರಾಜ್ಯೋತ್ಸವ: ಧಾರವಾಡದಲ್ಲಿ ಭವ್ಯ ಧ್ವಜಾರೋಹಣ ಕಾರ್ಯಕ್ರಮ

Spread the love

ಧಾರವಾಡ :ಜಿಲ್ಲಾಡಳಿತವು ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಭವ್ಯ ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಿದೆ.

ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸಾರ್ವಜನಿಕರಿಗೆ ರಾಜ್ಯೋತ್ಸವ ಸಂದೇಶ ನೀಡುವರು.

ಕಾರ್ಯಕ್ರಮದಲ್ಲಿ ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವರಾದ ಪ್ರಲ್ಹಾದ ಜೋಶಿ, ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಘನ ಉಪಸ್ಥಿತಿ ವಹಿಸುವರು.

ವಿಶೇಷ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕ ಹಾಗೂ ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಅಜೀಮ್‍ಪೀರ್ ಎಸ್. ಖಾದ್ರಿ ಅವರು ಭಾಗವಹಿಸುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ ವಹಿಸುವರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ವಿನಯ ಕುಲಕರ್ಣಿ, ಎನ್.ಎಚ್. ಕೋನರಡ್ಡಿ, ಎಸ್.ಎಚ್. ಸಂಕನೂರ, ಪ್ರದೀಪ ಶೆಟ್ಟರ, ಮಹೇಶ್ ಟೆಂಗಿನಕಾಯಿ, ಎಂ.ಆರ್. ಪಾಟೀಲ್, ಎಫ್.ಎಚ್. ಜಕ್ಕಪ್ಪನವರ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಯಮಿತದ ಅಧ್ಯಕ್ಷ ನಾಗೇಂದ್ರ ಕುಮಾರ್, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರ ಜ್ಯೋತಿ ಪಾಟೀಲ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅವರು ಭಾಗವಹಿಸುವರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಉಪಸ್ಥಿತರಿರುವರು.

ಕಾರ್ಯಕ್ರಮದ ವೇಳಾಪಟ್ಟಿ: ನವೆಂಬರ್ 1 ರಂದು ಬೆಳಿಗ್ಗೆ 8:30ಕ್ಕೆ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಗಣ್ಯರು, ವಿದ್ಯಾರ್ಥಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸಮಾವೇಶಗೊಳ್ಳುವರು. 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ ನಡೆಯಲಿದೆ. ನಂತರ ಸಚಿವರು ವಿವಿಧ ದಳಗಳ ಪರಿವೀಕ್ಷಣೆ ನಡೆಸಿ ರಾಜ್ಯೋತ್ಸವದ ಸಂದೇಶ ನೀಡುವರು. ಬಳಿಕ ಪಥಸಂಚಲನ ಹಾಗೂ ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ ಜರುಗಲಿದೆ.

ಅದೇ ದಿನ ಸಂಜೆ 4 ಗಂಟೆಗೆ, ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *