ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘದ (ಕ.ವಿ.ವ. ಸಂಘ) ಕೃಷಿ ಮತ್ತು ಪರಿಸರ ಮಂಟಪವು ತನ್ನ ಪ್ರಸಕ್ತ 3ನೇ ವರ್ಷದ ತ್ರೈವಾರ್ಷಿಕ ಅವಧಿಯ ಕಾರ್ಯಚಟುವಟಿಕೆಗಳ ಉದ್ಘಾಟನೆ ಮತ್ತು ‘ಭವಿಷ್ಯದಲ್ಲಿ ಕೃಷಿ ಮತ್ತು ಪರಿಸರ ಮಹತ್ವ’ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ಕಾರ್ಯಕ್ರಮವು ಇಂದು (ಅಕ್ಟೋಬರ್ 30, 2025), ಗುರುವಾರ ಸಂಜೆ 6 ಗಂಟೆಗೆ ಸಂಘದ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ನಡೆಯಲಿದೆ. ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಶಶಿಕಾಂತ ಉಡಿಕೇರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಡೋಣಿ-ಗದಗ ಕಪ್ಪತ್ತಗುಡ್ಡ ಶ್ರೀ ನಂದಿವೇರಿ ಸಂಸ್ಥಾನಮಠದ ಮಠಾಧ್ಯಕ್ಷರಾದ ಪೂಜ್ಯ ಶ್ರೀ ಮ.ನಿ.ಪ್ರ. ಶಿವಕುಮಾರ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ, ಮುಖ್ಯ ಉಪನ್ಯಾಸಕರಾಗಿ ಆಗಮಿಸುವರು. ಧಾರವಾಡದ ಪ್ರಗತಿಪರ ರೈತರಾದ ವಿರೂಪಾಕ್ಷಪ್ಪ ಮಟ್ಟಿ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಹುಬ್ಬಳ್ಳಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ಪ್ರಗತಿಪರ ರೈತರಾದ ಡಿ. ಟಿ. ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು.
ಕೃಷಿ ಮತ್ತು ಪರಿಸರದ ಮಹತ್ವವನ್ನು ತಿಳಿಯಲು ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮತ್ತು ಕೃಷಿ ಮತ್ತು ಪರಿಸರ ಮಂಟಪದ ಸಂಚಾಲಕ ಗುರು ಹಿರೇಮಠ ಅವರು ಜಂಟಿ ಪ್ರಕಟಣೆಯಲ್ಲಿ ಕೋರಿದ್ದಾರೆ.

