
ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿ: ನಾಳೆ ಧಾರವಾಡದಲ್ಲಿ ವಿಜೃಂಭಣೆಯ ಕಾರ್ಯಕ್ರಮ ಆಯೋಜನೆ
ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿಯನ್ನು ನಾಳೆ, ನವೆಂಬರ್ 08 ರಂದು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳು ನಡೆದಿವೆ. ಕಾರ್ಯಕ್ರಮವು ಬೆಳಿಗ್ಗೆ 11 ಗಂಟೆಗೆ ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ನಡೆಯಲಿದೆ.
ಮನಸೂರು ಶ್ರೀ ರೇವಣಸಿದ್ದೇಶ್ವರ ಮಹಾಮಠದ ಡಾ. ಬಸವರಾಜ ದೇವರು ಅವರು ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದು, ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ (ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರು) ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿದ್ದಾರೆ. ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರುಗಳಾದ ಅಬ್ಬಯ್ಯ ಪ್ರಸಾದ (ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರು), ಭರಮಗೌಡ ಅಲಗೌಡ ಕಾಗೆ (ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷರು), ವಿನಯ ಕುಲಕರ್ಣಿ, ಎನ್.ಎಚ್ ಕೋನರಡ್ಡಿ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ, ಎಫ್.ಹೆಚ್.ಜಕ್ಕಪ್ಪನವರ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಅಜೀಮ್ಪೀರ್ ಎಸ್.ಖಾದ್ರಿ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಡಿ ಮಂಡಳಿ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ನಾಗೇಂದ್ರ ಕುಮಾರ್, ಮಹಾನಗರ ಮಹಾಪೌರರಾದ ಜ್ಯೋತಿ ಪಾಟೀಲ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಲಘಟಗಿ ಗುಡ್ನ್ಯೂಸ್ ಪ್ರಥಮ ದರ್ಜೆ ಕಾಲೇಜು ನಿವೃತ್ತ ಪ್ರಾಂಶುಪಾಲ ಡಾ.ಬಿ.ಜಿ.ಬಿರಾದಾರ ಅವರು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾ ಪ್ರದೇಶ ಕುರುಬರ ಸಂಘ ಅಧ್ಯಕ್ಷೆ ಯಲ್ಲಮ್ಮ ಡಿ. ನಾಯ್ಕರ ಹಾಗೂ ದೇವರಾಜ ಕಂಬಳಿ, ರಾಜೇಶ್ವರಿ ಸಾಲಗಟ್ಟಿ, ಬಸವರಾಜ ಮಲಕಾರಿ, ಈಶ್ವರ ಕಾಳಪ್ಪನವರ ಉಪಸ್ಥಿತರಿರುವರು.
ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ.ಎಸ್.ಘಾಳಿ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸುವರೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

