ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

Spread the love

ಧಾರವಾಡ:ನ.17: 2025–26 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಯೋಜನೆಗಳಾದ ಧನಶ್ರೀ, ಚೇತನಾ, ಉದ್ಯೋಗಿನಿ, ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಹಾಗೂ ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಡಿಸೆಂಬರ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಮತ್ತು ಧನಶ್ರೀ ಯೋಜನೆಗಳಡಿ ಅರ್ಜಿ ಸಲ್ಲಿಸುವವರು ಆನ್‌ಲೈನ್ ಹಾಗೂ ಆಫ್‌ಲೈನ್ ಎರಡೂ ವಿಧಾನಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಭಿವೃದ್ಧಿ ನೀರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 0836-247850 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *