ಧಾರವಾಡ: ನಾಡಿನ ಹೆಮ್ಮೆಯ ಸಂಸ್ಥೆಯಾದ ಕರ್ನಾಟಕ ವಿದ್ಯಾವರ್ಧಕ ಸಂಘವು 70ನೇ ಕರ್ನಾಟಕ ರಾಜ್ಯೋತ್ಸವ ನಾಡಹಬ್ಬ-2025ರ ಅಂಗವಾಗಿ ನವೆಂಬರ್ 1 ರಿಂದ 30ರವರೆಗೆ ಒಂದು ತಿಂಗಳ ಪೂರ್ಣ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿ, ದಿನಾಂಕ ನವೆಂಬರ್ 19, 2025 ರಂದು ಸಂಜೆ 5:30 ಗಂಟೆಗೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಧಾರವಾಡದ ಎಂ. ಎಸ್. ಪಾಟೀಲ ಅವರು ಚಾಲನೆ ನೀಡಲಿದ್ದಾರೆ. ನರೇಂದ್ರದ ಸಂಗೀತಗಾರರಾದ ಆನಂದ ಪಾಟೀಲ ಅವರು ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಇದರ ಜೊತೆಗೆ, ಧಾರವಾಡದ ಕಲಾಶಕ್ತಿ ಫೌಂಡೇಶನ್ ತಂಡವು ನೃತ್ಯ ಪ್ರಸ್ತುತಿ ನೀಡಲಿದೆ. ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ವೀರಣ್ಣ ಒಡ್ಡೀನ ಅವರು ಈ ಕಾರ್ಯಕ್ರಮವನ್ನು ಸಂಯೋಜನೆ ಮಾಡುತ್ತಿದ್ದಾರೆ.
ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅವರು ಈ ಕುರಿತು ಪ್ರಕಟಣೆ ನೀಡಿದ್ದು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

