ಶಿರಗುಪ್ಪಿ ಗ್ರಾಮ ಪಂಚಾಯತಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ: ಗ್ರಾ ಪಂ ಅಧ್ಯಕ್ಷೆ ನಿರ್ಮಲಾ.ಚಿ. ಚವಡಶೇಟ್ಟಿ ಧ್ವಜಾರೋಹಣ

Spread the love

ಶಿರಗುಪ್ಪಿ ಗ್ರಾಮ ಪಂಚಾಯತಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ: ಗ್ರಾ ಪಂ ಅಧ್ಯಕ್ಷರಿಂದ ಧ್ವಜಾರೋಹಣ

ಹುಬ್ಬಳ್ಳಿ: ದೇಶಾದ್ಯಂತ 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಅಂಗವಾಗಿ ಶಿರಗುಪ್ಪಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ನಿರ್ಮಲಾ ಚಿದಾನಂದ ಚವಡಶೆಟ್ಟಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯದ ಮಹತ್ವವನ್ನು ಸಾರಿದರು.
ಈ ಸಮಯದಲ್ಲಿ ದೇಶಭಕ್ತಿಗೀತೆಗಳನ್ನು ಹಾಡಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಾಯಿತು. ಈ ಮೂಲಕ ಗ್ರಾಮಸ್ಥರು ಒಟ್ಟಾಗಿ ರಾಷ್ಟ್ರಪ್ರೇಮವನ್ನು ಸಾರಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು, ಗ್ರಾಮದ ಗುರು-ಹಿರಿಯರು, ಪಂಚಾಯಿತಿಯ ಎಲ್ಲ ಸಿಬ್ಬಂದಿಗಳು ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *