ಧಾರವಾಡ: ಜಿಲ್ಲೆಯಲ್ಲಿ ಬಿ.ಎಡ್. ಕೋರ್ಸ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ರೂ. 25,000/- ಗಳ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.
2025-26ನೇ ಸಾಲಿನಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಶನ್ (NCTE) ನಿಂದ ಮಾನ್ಯತೆ ಪಡೆದಿರುವ ಧಾರವಾಡ ಜಿಲ್ಲೆಯಲ್ಲಿನ ಸರ್ಕಾರಿ, ಅರೆಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್. ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯಕ್ಕೆ ಅರ್ಹರಾಗಿದ್ದಾರೆ.
ಅರ್ಜಿ ಸಲ್ಲಿಕೆ ವಿವರ:
ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ, ಪರ್ಶಿಯನ್) ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಈ ಪ್ರೋತ್ಸಾಹಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವ ಪೋರ್ಟಲ್: https://sevasindu.karnataka.gov.in
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 31, 2025.
ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ಸೇವಾಸಿಂಧು ಪೋರ್ಟಲ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ಹಾಗೂ ಸ್ಪಷ್ಟೀಕರಣಕ್ಕಾಗಿ ಇಲಾಖೆಯ ದೂರವಾಣಿ ಸಂಖ್ಯೆ 0836-2971590 ಅಥವಾ ಇಲಾಖಾ ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದಾಗಿದೆ.

