ಧಾರವಾಡ, ಡಿ. 09: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಡಿಸೆಂಬರ್ 11 ಮತ್ತು 12, 2025 ರಂದು ಜಿಲ್ಲಾ ಮಟ್ಟದ ‘ಕಲಾ ಪ್ರತಿಭೋತ್ಸವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಈ ಪ್ರತಿಭೋತ್ಸವ ಜರುಗಲಿದ್ದು, ಇದರಲ್ಲಿ ವಿವಿಧ ಕಲಾಪ್ರಕಾರಗಳ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಮತ್ತು ಯುವ ಪ್ರತಿಭೆಗಳು ಭಾಗವಹಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೆ ಗಣ್ಯರ ಆಗಮನ
ಡಿ. 11 ರಂದು ಬೆಳಿಗ್ಗೆ 10 ಗಂಟೆಗೆ ಕಲಾ ಪ್ರತಿಭೋತ್ಸವದ ಉದ್ಘಾಟನಾ ಸಮಾರಂಭ ನಡೆಯಲಿದೆ. ಕಾರ್ಮಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಘನ ಉಪಸ್ಥಿತಿ ವಹಿಸುವರು. ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಅತಿಥಿಗಳು
ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರು ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕರು ಹಾಗೂ ವಾಯವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ ಮತ್ತು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಅಜೀಮ್ಪೀರ್ ಎಸ್. ಖಾದ್ರಿ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಭಾಗಿ
ಶಾಸಕರಾದ ವಿನಯ ಕುಲಕರ್ಣಿ, ಎನ್.ಎಚ್. ಕೋನರಡ್ಡಿ, ಎಸ್.ವ್ಹಿ. ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಮತ್ತು ಎಫ್.ಹೆಚ್. ಜಕಪ್ಪನವರ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಇವರೊಂದಿಗೆ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಡಿ ಮಂಡಳಿ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ನಾಗೇಂದ್ರ ಕುಮಾರ್, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರರಾದ ಜ್ಯೋತಿ ಪಾಟೀಲ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ, ಮತ್ತು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಎಸ್. ಆರ್. ಪಾಟೀಲ ಅವರು ಕೂಡಾ ಭಾಗವಹಿಸುವರು.
ಜಿಲ್ಲಾಧಿಕಾರಿ ದಿವ್ಯ ಪ್ರಭು, ಡಾ. ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ. ವೀರಣ್ಣ ರಾಜೂರ, ಜಿಲ್ಲಾ ಕನ್ನಡ ಮತ್ತು ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ರಂಜಾನ್ ದುರ್ಗಾ, ಚಿತ್ರಕಲಾ ಶಿಲ್ಪಿ ಶ್ರೀ ಡಿ.ವ್ಹಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಬಿ. ಮಾರುತಿ, ಬೆಳಗಾವಿ ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಕೆ. ಎಚ್. ಚನ್ನೂರು, ರಂಗಾಯಣದ ಆಡಳಿತಾಧಿಕಾರಿ ಶಶಿಕಲಾ ಹುಡೇದ ಅವರು ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

