ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Spread the love

ಧಾರವಾಡ, ಡಿ. 09: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2025-26 ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮಹತ್ವದ ಯೋಜನೆಗಳ ಪ್ರಯೋಜನ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

​ಧನಶ್ರೀ, ಚೇತನಾ, ಉದ್ಯೋಗಿನಿ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಮತ್ತು ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳ ಅಡಿಯಲ್ಲಿ ಸಹಾಯಧನ ಅಥವಾ ಸಾಲ ಸೌಲಭ್ಯ ಪಡೆಯಲು ಬಯಸುವವರು ಅರ್ಜಿ ಸಲ್ಲಿಸಬಹುದು.

​ಅರ್ಜಿದಾರರು ಸೇವಾ ಸಿಂಧೂ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಓನ್, ಬೆಂಗಳೂರು ಓನ್, ಅಥವಾ ಕರ್ನಾಟಕ ಓನ್ ಕೇಂದ್ರಗಳಲ್ಲಿ ಡಿಸೆಂಬರ್ 15, 2025 ರೊಳಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನಿಗದಿಪಡಿಸಲಾಗಿದೆ.

​ಪ್ರಕಟಣೆಯ ಪ್ರಕಾರ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಮತ್ತು ಧನಶ್ರೀ ಯೋಜನೆಗಳಿಗೆ ಅರ್ಜಿ ಸಲ್ಲಿಸುವವರು ಆನ್‌ಲೈನ್ ಮೂಲಕ ಮಾತ್ರವಲ್ಲದೆ ಆಫ್‌ಲೈನ್‌ನಲ್ಲೂ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುತ್ತದೆ.

​ಹೆಚ್ಚಿನ ಮಾಹಿತಿ ಹಾಗೂ ಸ್ಪಷ್ಟೀಕರಣಕ್ಕಾಗಿ ಧಾರವಾಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರ ಕಚೇರಿಗೆ ಭೇಟಿ ನೀಡಬಹುದು. ಅಲ್ಲದೆ, ದೂರವಾಣಿ ಸಂಖ್ಯೆ: 0836-2447850 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *