ಧಾರವಾಡ, ಡಿ 10,: ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪವು, ಧಾರವಾಡದ ಛತ್ರಪತಿ ಶಿವಾಜಿ ಮಹಾರಾಜ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ “ಪರೀಕ್ಷೆಗಳು ಅಂದು-ಇಂದು” ಕುರಿತು ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ಕಾರ್ಯಕ್ರಮವು ಡಿಸೆಬಂರ್ 11, ರಂದು ಬೆಳಿಗ್ಗೆ 11:15 ಗಂಟೆಗೆ ಶ್ರೀ ಶಿವಾಜಿ ಮಹಾರಾಜ ಪದವಿಪೂರ್ವ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ.
ಧಾರವಾಡ ಮರಾಠಾ ವಿದ್ಯಾಪ್ರಸಾರಕ ಮಂಡಳದ ಅಧ್ಯಕ್ಷ ಮನೋಹರ ಎನ್. ಮೋರೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಧಾರವಾಡ ಮರಾಠಾ ವಿದ್ಯಾಪ್ರಸಾರಕ ಮಂಡಳದ ಗೌರವ ಕಾರ್ಯದರ್ಶಿ ರಾಜು ಆರ್. ಬಿರಜೆನವರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಧಾರವಾಡ ಮರಾಠಾ ವಿದ್ಯಾಪ್ರಸಾರಕ ಮಂಡಳಿಯ ಕಾಲೇಜು ಸುಧಾರಣಾ ಸಮಿತಿಯ ಅಧ್ಯಕ್ಷ ಪುರುಷೋತ್ತಮ ಎನ್. ಜಾಧವ ಅವರು ಅತಿಥಿಗಳಾಗಿ ಆಗಮಿಸುವರು. ಧಾರವಾಡದ ಚಿಂತಕ ಹಾಗೂ ಶಿಕ್ಷಣ ತಜ್ಞರಾದ ಎಂ.ಎ. ಚಿಕ್ಕಮಠ ಅವರು ಅತಿಥಿ ಉಪನ್ಯಾಸ ನೀಡಲಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀಮತಿ ಶೈಲಶ್ರೀ ಎಂ. ಸಂಕೋಜಿ ಅವರು ಗೌರವ ಉಪಸ್ಥಿತರಿರುವರು.
ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹಾಗೂ ಶಿಕ್ಷಣ ಮಂಟಪದ ಸಂಚಾಲಕ ವೀರಣ್ಣ ಒಡ್ಡೀನ ಅವರು ಜಂಟಿ ಪ್ರಕಟಣೆಯಲ್ಲಿ ಕೋರಿದ್ದಾರೆ.

