ಧಾರವಾಡದಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆ: ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ನಾಳೆಯು ಸಹ ರಜೆ ಘೋಷಣೆ

Spread the love

ಧಾರವಾಡ: ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಾಳೆ, ಆಗಸ್ಟ್ 20 ರಂದು, ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು (ಇಂದು) ಆದೇಶ ಹೊರಡಿಸಿದ್ದಾರೆ.

ಮಳೆಯಿಂದಾಗಿ ಉಂಟಾಗಬಹುದಾದ ತೊಂದರೆಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ. ಈ ರಜಾದಿನವನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ. ರಜೆಯ ಪರಿಹಾರವಾಗಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ನೀಡಿರುವ ರಜೆಯನ್ನು ಮುಂದಿನ ಸಾರ್ವತ್ರಿಕ ರಜಾ ದಿನಗಳಲ್ಲಿ ಹೆಚ್ಚುವರಿ ತರಗತಿಗಳನ್ನು ನಡೆಸುವ ಮೂಲಕ ಶೈಕ್ಷಣಿಕ ವೇಳಾಪಟ್ಟಿಯನ್ನು ಸರಿದೂಗಿಸಲು ನಿರ್ದೇಶನ ನೀಡಿದ್ದಾರೆ.

Leave a Reply

Your email address will not be published. Required fields are marked *