ಗುಡಗೇರಿ: ಇಸ್ಪೀಟ್ ಜೂಜಾಟದ ಮೇಲೆ ಪೊಲೀಸರ ದಾಳಿ; ಎಂಟು ಜನರ ಬಂಧನ

Spread the love

ಕುಂದಗೋಳ: ತಾಲ್ಲೂಕಿನ ಗುಡಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕಿಪುರ-ಗೌಡಗೇರಿ ರಸ್ತೆ ಪಕ್ಕದ ಹಳ್ಳದ ದಂಡೆಯ ಮೇಲೆ ಅಕ್ರಮವಾಗಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

​ಡಿಸೆಂಬರ್ 14 ರಂದು ಬೆಳಿಗ್ಗೆ ಸುಮಾರು 10:15 ಗಂಟೆಯ ಸುಮಾರಿಗೆ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ‘ಅಂದರ್-ಬಾಹರ್’ ಎಂಬ ಜೂಜಾಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ಕೈಗೊಂಡಿದ್ದಾರೆ. ದಾಳಿಯ ವೇಳೆ ಜೂಜಾಟದಲ್ಲಿ ತೊಡಗಿದ್ದ ಎಂಟು ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

​ಬಂಧಿತರಿಂದ ಒಟ್ಟು 8,200 ರೂಪಾಯಿ ನಗದು ಹಣ, 52 ಇಸ್ಪೀಟ್ ಎಲೆಗಳು ಹಾಗೂ ಜೂಜಾಟಕ್ಕೆ ಬಳಸುತ್ತಿದ್ದ ಒಂದು ನೀಲಿ ಬಣ್ಣದ ಟಾರ್ಚ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಕುರಿತು ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *