ಧಾರವಾಡ: ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆಗಳ ಸಭೆಯನ್ನು ಡಿಸೆಂಬರ್ 28 ರಂದು ಹಮ್ಮಿಕೊಳ್ಳಲಾಗಿದೆ.
ಧಾರವಾಡ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಸಭೆ ಜರುಗಲಿದೆ. ಪೊಲೀಸ್ ಇಲಾಖೆಯ ವ್ಯಾಪ್ತಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಕುಂದುಕೊರತೆಗಳ ಬಗ್ಗೆ ಚರ್ಚಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಸಭೆಯನ್ನು ಆಯೋಜಿಸಲಾಗಿದೆ.
ಜಿಲ್ಲೆಯಾದ್ಯಂತ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಗುಂಜನ್ ಆರ್ಯ ಅವರು ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

