ಧಾರವಾಡ: ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯು ಜನವರಿ 1, 2026 ರಿಂದ ಪ್ರಾರಂಭವಾಗಲಿರುವ ಆರು ತಿಂಗಳ ಅವಧಿಯ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ (ಡಿ.ಸಿ.ಎಂ) ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಈ ತರಬೇತಿಗೆ ಕನಿಷ್ಠ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ಶಿಷ್ಯವೇತನವನ್ನು ಸಹ ನೀಡಲಾಗುವುದು. ಈ ಡಿಪ್ಲೊಮಾ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದವರಿಗೆ ವಿವಿಧ ರೀತಿಯ ಸಹಕಾರ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಹೆಚ್ಚಿನ ಅವಕಾಶಗಳು ದೊರೆಯಲಿವೆ. ವಿಶೇಷವಾಗಿ ಅರ್ಬನ್ ಬ್ಯಾಂಕುಗಳಲ್ಲಿ ಹಾಗೂ ಇತರೆ ಸಹಕಾರ ಸಂಸ್ಥೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಈ ತರಬೇತಿ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 30, 2025 ರೊಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಿದೆ. ತರಬೇತಿ ಹಾಗೂ ಅರ್ಜಿ ಸಲ್ಲಿಕೆಯ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಇಚ್ಛಿಸುವವರು ಕಛೇರಿಯ ದೂರವಾಣಿ ಸಂಖ್ಯೆ 0836-2773349 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್‌ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

