
ಯಡಿಯಾಪುರದಲ್ಲಿ ಶ್ರೀ ಸಿದ್ದಲಿಂಗೇಶ್ವರ ಪಂಚಕಳಸ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ
ಕುಕನೂರ: ತಾಲೂಕಿನ ಯಡಿಯಾಪುರ ಗ್ರಾಮದಲ್ಲಿ ಶ್ರೀ ಸಿದ್ದಲಿಂಗೇಶ್ವರ ಪಂಚಕಳಸ ಜಾತ್ರಾ ಮಹೋತ್ಸವವು ಭಕ್ತಿಭಾವ ಹಾಗೂ ವಿಜೃಂಭಣೆಯಿಂದ ಜರುಗಲಿದ್ದು, ಗ್ರಾಮಸ್ಥರು ಹಾಗೂ ದೇವಸ್ಥಾನ ಸಮಿತಿಯವರು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ.
ಜಾತ್ರಾ ಮಹೋತ್ಸವದ ಅಂಗವಾಗಿ ದಿ. 02-01-2026 ರಂದು ಬೆಳಿಗ್ಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕುಂಭ ಮೆರವಣಿಗೆ ನಡೆಯಲಿದ್ದು, ಸಂಜೆ ಸಂಪ್ರದಾಯಬದ್ಧವಾಗಿ ಹುಚ್ಚಯ್ಯ ಎಳೆಯುವ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ.
ಅದೇ ರೀತಿ ದಿ. 03-01-2026 ರಂದು ಶ್ರೀ ಸಿದ್ದಲಿಂಗೇಶ್ವರ ಪಂಚಕಳಸ ರಥೋತ್ಸವ ಹಾಗೂ ಲಕ್ಷ ದೀಪೋತ್ಸವ ಅತ್ಯಂತ ಭಕ್ತಿಭಾವ ಮತ್ತು ವೈಭವದಿಂದ ನಡೆಯಲಿದ್ದು, ಸುತ್ತಮುತ್ತಲ ಗ್ರಾಮಗಳಿಂದ ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.
ಜಾತ್ರೆಯ ಅವಧಿಯಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ, ಪ್ರಸಾದ ವಿನಿಯೋಗ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಸ್ಥಾನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

