ರಾಷ್ಟ್ರಮಟ್ಟದ ಬಾಲಕರ ಶೂಟಿಂಗ್ ಚಾಂಪಿಯನ್‌ಶಿಪ್ ಪಂದ್ಯಾವಳಿಗೆಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳು ಆಯ್ಕೆ

Spread the love


ಧಾರವಾಡ, ಜ. 01:ಧಾರವಾಡದ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ 69ನೇ ರಾಷ್ಟ್ರಮಟ್ಟದ 14 ವರ್ಷದೊಳಗಿನ ಬಾಲಕರ ಶೂಟಿಂಗ್ ಚಾಂಪಿಯನ್‌ಶಿಪ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಈ ಪಂದ್ಯಾವಳಿ ಜನೆವರಿ 5, 2026 ರಿಂದ ಜನೆವರಿ 9, 2026 ರವರೆಗೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆಯಲಿದೆ.

ಆಯ್ಕೆಯಾದ ವಿದ್ಯಾರ್ಥಿಗಳಾದ ನವೀನಕುಮಾರ ಚವಾಣ, ಪ್ರಸನ್ನ ಯಾದವ, ಮೊಹಮ್ಮದ್ ಹ್ಯಾರಿಸ್ ಮದರಖಂಡಿ ಹಾಗೂ ವಿವೇಕ ಬೋರಳಕರ ಅವರನ್ನು ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯ ಅಧ್ಯಕ್ಷರು ಹಾಗೂ ಬೆಳಗಾವಿ ಉತ್ತರ ವಲಯದ ಆರಕ್ಷಕ ಮಹಾನಿರೀಕ್ಷಕರಾದ ಚೇತನಕುಮಾರ ರಾಠೋಡ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಗುಂಜನ್ ಆರ್ಯ, ಆಡಳಿತ ಮಂಡಳಿಯ ಸದಸ್ಯರು, ಶಾಲೆಯ ಪ್ರಾಚಾರ್ಯರು ಹಾಗೂ ಶಿಕ್ಷಕ–ಶಿಕ್ಷಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Leave a Reply

Your email address will not be published. Required fields are marked *