ಧಾರವಾಡ: ಜಿಲ್ಲೆಯ ಮರೇವಾಡ ಹಾಗೂ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ‘ಗ್ರಾಮ-ಒನ್’ ಕೇಂದ್ರಗಳಿಗೆ ಹೊಸದಾಗಿ ಫ್ರಾಂಚೈಸಿಗಳನ್ನು ನೇಮಕ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಧಾರವಾಡ ತಾಲ್ಲೂಕಿನ ಮರೇವಾಡ ಹಾಗೂ ಕಲಘಟಗಿ ತಾಲ್ಲೂಕಿನ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮ-ಒನ್ ಕೇಂದ್ರಗಳ ಫ್ರಾಂಚೈಸಿಗಳು ರಾಜೀನಾಮೆ ನೀಡಿದ ಹಾಗೂ ತಾಂತ್ರಿಕ ಕಾರಣಗಳಿಂದ ಕೇಂದ್ರಗಳನ್ನು ರದ್ದುಪಡಿಸಿದ ಹಿನ್ನೆಲೆಯಲ್ಲಿ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇ-ಆಡಳಿತ ಇಲಾಖೆಯ ಇ.ಡಿ.ಸಿ.ಎಸ್. ನಿರ್ದೇಶನಾಲಯದ ಮಾರ್ಗಸೂಚಿಯಂತೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ವೆಬ್‌ಸೈಟ್ (https://www.karnatakaone.gov.in/Public/GramOneFranchiseeTerms) ಮೂಲಕ ಜನೆವರಿ 15, 2026 ರೊಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ತಾಂತ್ರಿಕ ನೆರವಿಗಾಗಿ ಅಭ್ಯರ್ಥಿಗಳು ಹೆಲ್ಪ್ ಡೆಸ್ಕ್ ಮೊಬೈಲ್ ಸಂಖ್ಯೆಗಳಾದ 9019026687, 9019026697, 9019026690 ಅಥವಾ 9019027696 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

