
ಹುಬ್ಬಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಹಾಗೂ ಅಪಪ್ರಚಾರಗಳನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಜೈನ ಸಮುದಾಯದವರು ಬೃಹತ್ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಈ ಸಮಯದಲ್ಲಿ ಮಾತನಾಡಿದ ಸಮುದಾಯದ ಮುಖಂಡರು, “ಧರ್ಮಸ್ಥಳದ ವಿರುದ್ಧ ಇನ್ನು ಮುಂದೆ ಅವಹೇಳನಕಾರಿ ಹೇಳಿಕೆ ನೀಡಿದರೆ ಅಥವಾ ಬೇರೆ ಯಾವುದೇ ರೀತಿಯಲ್ಲಿ ಅಪಪ್ರಚಾರ ಮಾಡಿದರೆ ನಾವು ಸುಮ್ಮನೆ ಇರುವುದಿಲ್ಲ” ಎಂದು ಎಚ್ಚರಿಕೆ ನೀಡಿದರು. ಕೂಡಲೇ ಸರ್ಕಾರ ಗಿರೀಶ್, ಮತ್ತು ತಿಮ್ಮರೋಡಿ ಹಾಗೂ ಇತರರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.ಈ ಪ್ರತಿಭಟನೆಯು ಧರ್ಮಸ್ಥಳದ ಘನತೆಯನ್ನು ಎತ್ತಿ ಹಿಡಿಯುವ ಮತ್ತು ಅಪಪ್ರಚಾರವನ್ನು ತಡೆಯುವ ಉದ್ದೇಶವನ್ನು ಹೊಂದಿದೆ ಎಂದರು.
ಪ್ರತಿಭಟನೆಯಲ್ಲಿ ನೂರಾರು ಜೈನ ಸಮುದಾಯದ ಮುಖಂಡರು ಮತ್ತು ಸದಸ್ಯರು ಭಾಗವಹಿಸಿದ್ದರು.

