ಧಾರವಾಡ: ಇಲ್ಲಿನ ಕುಂಬಾಪುರ ಫಾರ್ಮ್‌ನಲ್ಲಿರುವ ಪ್ರಾದೇಶಿಕ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ರೈತರಿಗಾಗಿ ವೈಜ್ಞಾನಿಕ ಪದ್ಧತಿಯಲ್ಲಿ ಗೋಡಂಬಿ ಬೆಳೆಯುವ ಕುರಿತು ಒಂದು ದಿನದ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಮುಂಬರುವ ಜನವರಿ 19, 2026 ರಂದು ನಡೆಯಲಿರುವ ಈ ತರಬೇತಿ ಶಿಬಿರದಲ್ಲಿ ಗೋಡಂಬಿ ಬೆಳೆಗೆ ಸಂಬಂಧಿಸಿದ ಸುಧಾರಿತ ತಂತ್ರಜ್ಞಾನಗಳು, ಹೆಚ್ಚು ಇಳುವರಿ ನೀಡುವ ತಳಿಗಳ ಆಯ್ಕೆ ಹಾಗೂ ತೋಟದ ಸಮಗ್ರ ನಿರ್ವಹಣೆಯ ಕುರಿತು ತಜ್ಞರು ಮಾಹಿತಿ ನೀಡಲಿದ್ದಾರೆ. ಇದರೊಂದಿಗೆ ಪೋಷಕಾಂಶಗಳ ನಿರ್ವಹಣೆ, ಕೀಟ ಮತ್ತು ರೋಗಗಳ ನಿಯಂತ್ರಣ ಹಾಗೂ ಬೆಳೆ ಕಟಾವಿನ ನಂತರ ಅನುಸರಿಸಬೇಕಾದ ತಂತ್ರಜ್ಞಾನಗಳ ಬಗ್ಗೆ ನುರಿತ ವಿಜ್ಞಾನಿಗಳು ರೈತರಿಗೆ ತಾಂತ್ರಿಕ ಮಾರ್ಗದರ್ಶನ ನೀಡಲಿದ್ದಾರೆ.
ಆಸಕ್ತ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಜನವರಿ 17, 2026 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗಾಗಿ ಕೇಂದ್ರದ ಮುಖ್ಯಸ್ಥರಾದ ಡಾ. ಪಲ್ಲವಿ ಜಿ. (ಮೊಬೈಲ್ ಸಂಖ್ಯೆ: 7892770955) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಪ್ರಕಟಣೆ ತಿಳಿಸಿದೆ.

