ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು ಮಂಜೂರು, ಬಂಧನ ಭೀತಿಯಿಂದ ಪಾರು

Spread the love

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ವಿಡಿಯೋ ಮಾಡಿದ್ದ ಆರೋಪದ ಮೇಲೆ ಬಂಧನದ ಭೀತಿ ಎದುರಿಸುತ್ತಿದ್ದ ಯೂಟ್ಯೂಬರ್ ಎಂ.ಡಿ. ಸಮೀರ್ ಅವರಿಗೆ ಮಂಗಳೂರು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಸಮೀರ್ ತಾತ್ಕಾಲಿಕವಾಗಿ ಬಂಧನದಿಂದ ಪಾರಾಗಿದ್ದಾರೆ.

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಕೆಲವು ಪ್ರಕರಣಗಳ ಕುರಿತು ಸಮೀರ್ ಯೂಟ್ಯೂಬ್‌ನಲ್ಲಿ ವಿಡಿಯೋ ಪ್ರಕಟಿಸಿದ್ದರು. ಈ ಸಂಬಂಧ ಅವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 12ರಂದು ಸ್ವಯಂಪ್ರೇರಿತ (suo moto) ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ತನಿಖೆಗಾಗಿ ಪೊಲೀಸರು ಗುರುವಾರ ಸಮೀರ್ ಅವರನ್ನು ಬಂಧಿಸಲು ಬೆಂಗಳೂರಿನ ಬನ್ನೇರುಘಟ್ಟ ಸಮೀಪದ ಹುಲ್ಲಳ್ಳಿಯಲ್ಲಿರುವ ಅವರ ಮನೆಗೆ ತೆರಳಿದ್ದರು. ಆದರೆ, ಆ ಸಮಯದಲ್ಲಿ ಸಮೀರ್ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿತ್ತು.
ಪೊಲೀಸರ ಆಗಮನಕ್ಕೂ ಮುನ್ನವೇ ಎಚ್ಚೆತ್ತ ಸಮೀರ್, ಆಗಸ್ಟ್ 19ರಂದು ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.

ಇದೀಗ ನ್ಯಾಯಾಲಯವು ಅವರ ಅರ್ಜಿಯನ್ನು ಪರಿಗಣಿಸಿ ಜಾಮೀನು ನೀಡಿದೆ. ಈ ಆದೇಶದ ನಂತರ ಪೊಲೀಸರು ಅವರನ್ನು ಸದ್ಯಕ್ಕೆ ಬಂಧಿಸುವಂತಿಲ್ಲ.

Leave a Reply

Your email address will not be published. Required fields are marked *