ಧಾರವಾಡ: ನಗರದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ತರಬೇತಿ ಕೇಂದ್ರ ಹಾಗೂ ಪಶು ಆಸ್ಪತ್ರೆ ಕಚೇರಿಯಲ್ಲಿರುವ ಅನುಪಯುಕ್ತ ಸಾಮಗ್ರಿಗಳ ಮರು ಹರಾಜು ಪ್ರಕ್ರಿಯೆಯನ್ನು ಜನವರಿ 21, 2026ರಂದು ಬೆಳಿಗ್ಗೆ 10:30ಕ್ಕೆ ಏರ್ಪಡಿಸಲಾಗಿದೆ.
ಹರಾಜಿನಲ್ಲಿ ಭಾಗವಹಿಸಲು ಇಚ್ಛಿಸುವ ಸಾರ್ವಜನಿಕರು ಹಾಗೂ ಆಸಕ್ತರು ಕಚೇರಿಗೆ ಖುದ್ದು ಭೇಟಿ ನೀಡಿ ಸಾಮಗ್ರಿಗಳನ್ನು ಪರಿಶೀಲಿಸಬಹುದಾಗಿದೆ. ಆಸಕ್ತರು ಜನವರಿ 19, 2026ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು, ಬಿಡ್ಗೆ ಸಂಬಂಧಿಸಿದ ಠೇವಣಿ ಮೊತ್ತವನ್ನು ಭರಣ ಮಾಡುವ ಮೂಲಕ ಹರಾಜಿನಲ್ಲಿ ಭಾಗವಹಿಸಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

