ಗಣರಾಜ್ಯೋತ್ಸವ: ಕ್ರೀಡಾ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ; ಅರ್ಜಿ ಆಹ್ವಾನ

Spread the love

ಧಾರವಾಡ: ಮುಂಬರುವ ಜನವರಿ 26, 2026 ರಂದು ಜರುಗಲಿರುವ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ, ಕ್ರೀಡೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರನ್ನು ಸನ್ಮಾನಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅರ್ಜಿ ಆಹ್ವಾನಿಸಿದೆ.

​2025 ನೇ ಸಾಲಿನಲ್ಲಿ (ದಿನಾಂಕ: 01-01-2025 ರಿಂದ 31-12-2025 ರ ವರೆಗೆ) ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ವಿಜೇತರಾದವರು ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರು ಈ ಸನ್ಮಾನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

​ಆಸಕ್ತ ಅರ್ಹ ಸಾಧಕರು (ಈ ಹಿಂದೆ ಸನ್ಮಾನಿಸಲ್ಪಟ್ಟವರನ್ನು ಹೊರತುಪಡಿಸಿ) ತಮ್ಮ ಸಾಧನೆಯ ದೃಢೀಕೃತ ದಾಖಲೆಗಳೊಂದಿಗೆ ಜನವರಿ 19, 2026 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0836-2447424 ಅನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *